ರಾಜ್ಯದಲ್ಲಿ ಮೂರುದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ

Date:

ಕರ್ನಾಟಕದ ಕೆಲವೆಡೆ ಮೇ 28ರಂದು ಭಾರೀ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಂಭವ ಇದೆ. ಹೀಗಾಗಿ ಇಲ್ಲಿ ಜನರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

ಹಾಸನ ಜಿಲ್ಲೆಯ ಬೇಲೂರು ಹಾಗೂ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಿನ್ನೆ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ. ಚಿಕ್ಕಮಗಳೂರಿನ ಕಳಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಾಳೆ (ಮೇ 30, ಮಂಗಳವಾರ) ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದದ್ದು, ಗುಡುಗು ಸಹಿತ ಮಳೆಯಾಗುಗವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಮಳೆ | ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಜೀವನ ಅಸ್ತವ್ಯಸ್ತ

ರಾಜ್ಯದ ಕೆಲವೆಡೆ ಉಷ್ಣಾಂಶದಲ್ಲಿ ಬದಲಾವಣೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಅಂದರೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಮಾನ್ಯವಾಗಿದೆ. ರಾಯಚೂರಿನಲ್ಲಿ ಗರಿಷ್ಠ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 70,132 ಎಕರೆ ಭೂಮಿಯಲ್ಲಿ ಬಿತ್ತನೆ ಗುರಿ ಇದೆ. ರೈತರು ಬಿತ್ತನೆ ಕಾರ್ಯಕ್ಕೆ ಸಜ್ಜಾಗುತ್ತಿದ್ದು, ಭೂಮಿ ಹದ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆಯ ಸಿಂಚನದೊಂದಿಗೆ ಬಿತ್ತನೆ ಆರಂಭವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸರ್ಕಾರಗಳು ನಮ್ಮ ಜೀವನವನ್ನು ಅಧೋಗತಿಗೆ ಇಳಿಸಿವೆ: ವಿ.ಜಿ. ದೇಸಾಯಿ

ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಚಿಕ್ಕಬಳ್ಳಾಪುರದಲ್ಲಿ ಶೇ.72 ರಷ್ಟು ಶಾಂತಿಯುತ ಮತದಾನ; ಯಲಹಂಕದಲ್ಲಿ ಡಲ್, ಹೊಸಕೋಟೆಯಲ್ಲಿ ಬಹುತೇಕ ಫುಲ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಶೇ.72 ರಷ್ಟು ಮಂದಿ ಮತ ಚಲಾವಣೆ...