ದಕ್ಷಿಣ ಕನ್ನಡ | ಕುತ್ತಿಗೆಗೆ ಇರಿದು ಯುವತಿಯ ಕೊಲೆ; ಆರೋಪಿಯ ಬಂಧನ

Date:

  • ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಘಟನೆ
  • ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ ಮೃತಪಟ್ಟ ಯುವತಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ.

ಕೊಲೆಯಾದ ಯುವತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಎಂದು ಗುರುತಿಸಲಾಗಿದೆ. ಆರೋಪಿ ಪದ್ಮರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪದ್ಮರಾಜ್‌ ಗುರುವಾರ ಮಧ್ಯಾಹ್ನ ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೈಯಲು ಯತ್ನ ನಡೆಸಿದ್ದಾನೆ. ಗಾಯಗೊಂಡು ಯುವತಿ ಬಿದ್ದ ಬಳಿಕ ಪರಾರಿಯಾಗಿದ್ದ ಎನ್ನಲಾಗಿದೆ.

‘ಅಳಿಕೆ ನಿವಾಸಿ 18 ವರ್ಷದ ಗೌರಿ ಎಂಬ ಯುವತಿಗೆ ಪದ್ಮರಾಜ್ ಎಂಬ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಪುತ್ತೂರು ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆʼ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಸಿ.ಬಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...