ದ.ಕ. | ಗುಣಮಟ್ಟದ ಶಿಕ್ಷಣಕ್ಕಾಗಿ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ: ಸಚಿವ ದಿನೇಶ್ ಗುಂಡೂರಾವ್

Date:

ಮಂಗಳೂರು ನಗರದ ಉರ್ವ ಸ್ಟೋರ್‌ನಲ್ಲಿ ರೂ.5 ಕೋಟಿ ವೆಚ್ಚದಲ್ಲಿನಿರ್ಮಾಣಗೊಂಡಿರುವ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ, ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜ ಅರಸು ಭವನ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಉದ್ಘಾಟಿಸಿದರು.

- Advertisement -

ಬಳಿಕ ಮಾತನಾಡಿ, ದ.ಕ. ಜಿಲ್ಲೆಯಲ್ಲಿ ಸಾಕಷ್ಟು ವಿದ್ಯಾಸಂಸ್ಥೆಗಳು ಇದೆ. ಈ ಜಿಲ್ಲೆಯಲ್ಲಿಉತ್ತಮ ಶಿಕ್ಷಣ ಸಿಗುವುದರಿಂದ ಬೇರೆ ಬೇರೆ ಕಡೆಯಿಂದ ಹಲವಾರು ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಅದರಿಂದ ಈ ಭಾಗದಲ್ಲಿ ವಸತಿ ನಿಲಯಗಳಿಗೆ ಬೇಡಿಕೆ ಹೆಚ್ಚಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಕ್ಕಿದರೇ ಸಮಾಜ ಅಭಿವೃದ್ಧಿಯಾಗಲು ಪೂರಕ ವಾತಾವರಣ ನಿರ್ಮಾಣವಾಗುತ್ತದೆ  ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಸಚಿವರು ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಪೋಷಕರು ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮಹಿಳೆಯವರು ಸಿಕ್ಕ ಅವಕಾಶ ಬಳಸಿಕೊಂಡು ಎಲ್ಲ ರಂಗದಲ್ಲೂ ತಮ್ಮದೇ ಛಾಪು ಮೂಡಿಸುತ್ತಿದಾರೆ. ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿಯೂ ಹೆಚ್ಚಿನ ಪ್ರಮಾಣದಲ್ಲಿ ಸಿಗಬೇಕಾಗಿದೆ’ ಎಂದರು.

ಇದನ್ನೂ ಓದಿ: ಮಂಗಳೂರು | ರೆಡ್‌ ಕ್ರಾಸ್‌ ಶತಮಾನೋತ್ಸವ ಕಟ್ಟಡ ಉದ್ಘಾಟನೆ

ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ, ತಾಲ್ಲೂಕು ಅಧಿಕಾರಿ ಮಹಾಲಕ್ಷ್ಮಿ ಬೋಳಾ‌ರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...