ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್: ರಾಮಲಿಂಗಾರೆಡ್ಡಿ ಸ್ಪಷ್ಟನೆ

Date:

  • ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಆದೇಶ
  • ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದ ಬಿಜೆಪಿ ನಾಯಕರು

ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು ಕನ್​ಫ್ಯೂಸ್​ ಆಗಿದ್ದಾರೆ ಅಷ್ಟೇ. ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ. ಸ್ಟೇಟಸ್ ರಿಪೋರ್ಟ್ ಕೇಳಿದ್ದನ್ನು ನಮ್ಮ ಇಲಾಖೆಯ ಆಯುಕ್ತರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಮಜಾಯಿಷಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿತ್ತು. ಇನ್ನು ಶೇ‌.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು, ಅನುದಾನ ಬಿಡುಗಡೆ ಮಾಡದಂತೆ ಉಲ್ಲೇಖಿಸಲಾಗಿತ್ತು. ಹಾಗೂ ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಲು ಸೂಚಿಸಲಾಗಿತ್ತು. ಹೀಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೂರು ನಿರ್ದೇಶನಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶದಲ್ಲಿ ನೀಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ಈ ಆದೇಶ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ರಾಮಲಿಂಗಾರೆಡ್ಡಿ ಅವರು ಆದೇಶ ವಾಪಸ್​​ ಪಡೆದುಕೊಳ್ಳುವಂತೆ ದತ್ತಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ವಿವಾದ ಇಲ್ಲಿಗೆ ಕೊನೆಗೊಂಡಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...