ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾವಣೆ : ಬೊಮ್ಮಾಯಿ

Date:

ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣವೇ ಬದಲಾವಣೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಹೋಗುವಂತ ದಾರಿ ನೋಡಿದರೆ ಬಹಳ ದಿನ‌ ನಡೆಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್​​ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆ ಇಲ್ಲ. ನಾವು ನಮ್ಮ ಹಣದಿಂದ ರಾಜಕೀಯ ಮಾಡುತ್ತಿದ್ದೇವೆ. ನಾವು ತಂದ ಜನಪರ ಕಾನೂನು ರದ್ದುಪಡಿಸಲು ಹೊರಟಿದ್ದಾರೆ ಎಂದಿದ್ದಾರೆ.

ಎಲ್ಲೋ ಅಲ್ಪಸ್ವಲ್ಪ ವ್ಯತ್ಯಾಸ ಆಗಿದಕ್ಕೆ ನಾವು ಸೋತಿರಬಹುದು. ಆದರೆ, ನಾವು ಸ್ವಾಭಿಮಾನ ಕಳೆದುಕೊಂಡಿಲ್ಲ. ಮೋದಿಯವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ ಮತ್ತೆ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? ದ್ವೇಷ ರಾಜಕಾರಣಕ್ಕೆ ಕಾನೂನಿನ ಮೂಲಕವೇ ಉತ್ತರಿಸುವೆ: ಅಶ್ವತ್ಥ ನಾರಾಯಣ

ದೇವರು ಸ್ವಲ್ಪ ವಿಶ್ರಾಂತಿ ಕೊಟ್ಟಿದ್ದಾನೆ

ಕ್ಷೇತ್ರದ ಜನರ ಜೊತೆ ಕಾಲ ಕಳೆಯಲು ಆಗಿಲ್ಲ, ಅದಕ್ಕೆ ದೇವರು ಸ್ವಲ್ಪ ವಿಶ್ರಾಂತಿ ಕೊಟ್ಟಿದ್ದಾನೆ. ಅಂತಹ ಶಕ್ತಿ ನಿಮ್ಮಲ್ಲಿ ಇದೆ, ಅಲ್ಲಿ ಬೇಡ ಇಲ್ಲಿಗೆ ಬನ್ನಿ ಎಂದು ಕರೆಯಿಸಿಕೊಂಡಿದ್ದೀರಾ. ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿದ್ದೇನೆ ಅನ್ನುವುದಕ್ಕಿಂತ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತ ಸ್ವತಃ ಸ್ಪರ್ಧೆ ಮಾಡಿರುವ ಹಾಗೆ ಚುನಾವಣೆ ನಡೆಸಿದ್ದೀರಿ. ನಿಮ್ಮನ್ನು ನೀವು ಈ ಚುನಾವಣೆಯಲ್ಲಿ ಗೆಲ್ಲಿಸಿಕೊಂಡಿದ್ದೀರಿ ಎಂದು ಹೇಳಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ...

ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ...

ಬಿಜೆಪಿ ಆತ್ಮಾವಲೋಕನ : ಕೆ ಸುಧಾಕರ್ ಕುಯಿಲು, ಎಂಟಿಬಿ ಹುಯಿಲು!

ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೆ. ಸುಧಾಕರ್...

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...