ರಾಯಚೂರು | ಬಡವರಿಗೆ ಬದುಕುವ ಗ್ಯಾರಂಟಿ ಬೇಕು; ಸಾಯುವ ಗ್ಯಾರಂಟಿ ಬೇಡ

Date:

  • ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳ ಹೆಚ್ಚಳಕ್ಕೆ ಮದ್ಯಪಾನ ಕಾರಣ
  • ಹೊಸ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರ ಖಂಡನೀಯ

ಸರ್ಕಾರ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವ ಪ್ರಸ್ತಾವನೆ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ ಕಾರ್ಯಕರ್ತರು ರಾಯಚೂರಿನಲ್ಲಿ ಪತ್ರ ಚಳವಳಿ ನಡೆಸಿದರು.

- Advertisement -

ರಾಜ್ಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಸರ್ಕಾರದ ನಿರ್ಧಾರ ಖಂಡಿಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಂಚೆ ಮುಖಾಂತರ ರವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಗರದ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರತಿಭಟನಾಕಾರರು “ಅಬಕಾರಿ ಇಲಾಖೆಯ ಈ ನಿರ್ಧಾರವನ್ನು ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಈಗಾಗಲೇ ಮದ್ಯಪಾನದಂಥ ದುಶ್ಚಟಗಳಿಂದ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಈ ನಡುವೆ ಬೆಲೆಯೇರಿಕೆ, ಬಡತನ, ನಿರುದ್ಯೋಗದಿಂದ ಬಡವರ ಜೀವನ ತತ್ತರಿಸಿದೆ. ಜೊತೆಗೆ ನೈತಿಕ ಮೌಲ್ಯಗಳು ಕುಸಿಯುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯಪಾನ ಕೂಡ ಮುಖ್ಯ ಕಾರಣ ಎನ್ನುವುದನ್ನು ಹಲವು ವರದಿಗಳು ಸಾಬೀತುಪಡಿಸುತ್ತಲೇ ಇವೆ. ಆದರೆ, ಸರ್ಕಾರ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ನಿರ್ಧಾರ ಕೈಗೆತ್ತಿಕೊಂಡಿರುವುದು ಸಮಂಜಸವಲ್ಲ. ಐದು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೊಸ ಮದ್ಯದಂಗಡಿ ತೆರೆಯಲು ಸಿದ್ಧತೆ ನಡೆಸುತ್ತಿರುವ ರಾಜ್ಯ ಸರ್ಕಾರದ ಈ ನಡೆ ಸರಿಯಲ್ಲ. ಜನರಿಗೆ ಬದುಕುವ ಗ್ಯಾರಂಟಿ ಬೇಕು, ಸಾಯುವ ಗ್ಯಾರಂಟಿ ಬೇಡ” ಎಂದು ಅಸಮಾಧಾನ ಹೊರಹಾಕಿದರು.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾವಿನಕೆರೆಗೆ ಉದ್ದೇಶಪೂರ್ವಕವಾಗಿ ಕಸ ಸುರಿಯುತ್ತಿದ್ದಾರೆ: ಮಾರುತಿ ಬಗಾಡೆ ಕಳವಳ

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಆರ್.ಹುಚ್ಚರೆಡ್ದಿ, ಜಿ ಅಮರೇಶ್, ಅಜೀಜ್ ಜಾಗೀರದಾರ್, ಸೈಯದ್ ಅಬ್ಬಾಸ್ ಅಲಿ, ಮಲ್ಲಯ್ಯ ಕಟ್ಟೀಮನಿ, ನಿರಂಜನ್, ಲಕ್ಷ್ಮಣ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...