ಮೈಸೂರು | ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪುವಂತಾಗಬೇಕು : ಸಚಿವ ಮಹದೇವಪ್ಪ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ ‘ಸಂವಿಧಾನ ಪೀಠಿಕೆ’ ಶಿಲಾಫಲಕ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ‘ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ, ಪ್ರತಿ ಮನೆ ಮನೆಗೂ ತಲುಪಬೇಕು’ ಎಂದು ಕರೆ ಕೊಟ್ಟರು.

- Advertisement -

“ನಾವು ಭಾರತೀಯರು, ಭಾರತದ ಮೂಲ ನಿವಾಸಿಗಳು ಎಂಬುದನ್ನು ಅರಿವು ಮೂಡಿಸಲು ಸಂವಿಧಾನ ಪೀಠಿಕೆ ಅಗತ್ಯ. ಹಾಗಾಗಿ, ನಾನು ಸಚಿವನಾದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೀಠಿಕೆ ಓದಿಸಲು ಪ್ರಾರಂಭಿಸಿದೆ. ಅದೇ ರೀತಿ ಇಂದು ಮೈಸೂರು ನಗರದ ಪ್ರಮುಖ ಸ್ಥಳದಲ್ಲಿ ಪಾಲಿಕೆ ವತಿಯಿಂದ ಬೃಹತ್ ಸಂವಿಧಾನ ಪೀಠಿಕೆ ಶಿಲಾಫಲಕ ನಿರ್ಮಿಸಲಾಗಿದೆ. ಇದು ಒಳ್ಳೆಯ ಬೆಳವಣಿಗೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ದೇಶದಲ್ಲಿ ಸಂವಿಧಾನ ಮರೆಮಾಚುವ ಕೆಲಸ ನಡೆಯುತ್ತಿದೆ. ಆದರೆ, ಅದು ಸಾಧ್ಯವಿಲ್ಲ. ಹೀಗಾಗಿ, ದಲಿತರು, ಅಸ್ಪೃಶ್ಯರು ಒಗ್ಗಟ್ಟಾಗಬೇಕು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಅಂಬೇಡ್ಕರ್ ವಾದ ಗಟ್ಟಿಗೊಳಿಸಬೇಕು. ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಿದಾಗ ಮಾತ್ರ ಭಾರತೀಯರಾಗಿ ನಾವೆಲ್ಲಾ ಒಂದೇ ಎಂದು ಅರಿತು ಬಾಳಬಹುದು” ಎಂದು ಹೇಳಿದರು.

ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ, “ಸಾಂಸ್ಕೃತಿಕ ನಗರದಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಏಕೆಂದರೆ, ಸರ್ವ ಧರ್ಮ ಸಮಭಾವ ಈ ಸಂವಿಧಾನ ಪೀಠಿಕೆಯಲ್ಲಿದೆ. ಸಂವಿಧಾನದ ಪೀಠಿಕೆ ಈ ದೇಶದ ರಕ್ಷಾ ಕವಚ. ಇದಕ್ಕಾಗಿ, ಎಲ್ಲಾ ಶಾಲಾ, ಕಾಲೇಜುಗಳು, ಹಾಸ್ಟೆಲ್ ಗಳಲ್ಲಿ ಸಂವಿಧಾನ ಪೀಠಿಕೆ ಹಾಕಲಾಗಿದೆ” ಎಂದು ಹೇಳಿದರು.

‘ಭಾರತ ಒಂದು-ಭಾರತೀಯರೆಲ್ಲ ಬಂಧು’ ಎಂಬ ಸಂದೇಶ ಸಾರುವ ಸಮಾನತೆಯ ಸಂಕೇತ ಕೊಟ್ಟವರು ಅಂಬೇಡ್ಕರ್. ಇಂತಹ ಮಹಾನ್ ನಾಯಕ ಕೊಟ್ಟ ಈ ಪೀಠಿಕೆಯನ್ನು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಹಾಕಬೇಕು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಳ್ಳೆಗಾಲ | ಸಾವಿತ್ರಿಬಾಯಿ ಫುಲೆ ನೆನಿಪಿಸಿಕೊಳ್ಳಿ; ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ : ಎ ಆರ್ ಕೃಷ್ಣಮೂರ್ತಿ

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ಮಂಜೇಗೌಡ, ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಮಾಜಿ ಮೇಯರ್ ಪುರುಷೋತ್ತಮ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ದಲಿತ ಸಂಘಟನೆಗಳ ಹಲವು ಮುಖಂಡರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...