ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಅಹೋರಾತ್ರಿ ಧರಣಿ ಇಂದು ಅಂತ್ಯಗೊಂಡಿದೆ.
ಮೊದಲ ದಿನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೋರಟ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರವಾಗಿ ಪ್ರತಿಭಟಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ರಾತ್ರಿಯೂ ಅಹೋರಾತ್ರಿ ಧರಣಿ ನಡೆಸಿದರು.

ಬುಧವಾರ ಸರ್ಕಾರಕ್ಕೆ ಗಡುವು ನೀಡಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಮಾಧ್ಯಮದವರಿಗೆ ಮಾಹಿತಿ ತಿಳಿಸಿದರು. ರಾಜ್ಯ ಹಾಗೂ ಸ್ಥಳೀಯ ಮಟ್ಟದಲ್ಲಿ ಆಗುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಅಂಗನವಾಡಿ ನೌಕರರ ಹಲವು ಬೇಡಿಕೆಗಳ ಬಗ್ಗೆ ಕಳೆದ ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತದೆ ಆದರೆ ಈವರೆಗೂ ಆಳುವ ಸರ್ಕಾರಗಳು ಕೇವಲ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಬಿ.ಎಂ ಪುಷ್ಪ ಮಾತನಾಡಿದರು.
ಇದನ್ನೂ ಓದಿದ್ದೀರಾ?ಹಾಸನ l ಅಂಗನವಾಡಿ ಅಮ್ಮಂದಿರ ಅಹೋರಾತ್ರಿ ಪ್ರತಿಭಟನೆ
ಈ ವೇಳೆ ಉಪಾಧ್ಯಕ್ಷರಾದ ಶಾರದ,ಕಾಮಾಕ್ಷಿ ರಾಜು, ಹೆಚ್.ಟಿ.ಮೀನಾಕ್ಷಿ, ಕಾರ್ಯದರ್ಶಿಗಳಾದ ಟಿ.ಹೆಚ್ ಜಯಂತಿ, ಕೆ ಪಿ.ವೀಣಾ, ಸುಮಿತ್ರಾ, ವಿಣಾ, ಗೀತಾ, ಜರೀನಾ ಹಾಗೂ ಬಿ ಕೆ.ಸಂಗೀತ, ಪೂರ್ಣಿಮಾ ಇನ್ನಿತರರು ಉಪಸ್ಥಿತಿಯಲಿದ್ದರು.
