ಬೀದರ್ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ, ಪೇದೆ

Date:

  • ಮರಳು ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ
  • ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಲಾರಿ ಮಾಲೀಕ

ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆ ಪಿಎಸ್‌ಐ ಶೀಲಾ ನ್ಯಾಮನ್, ಕಾನ್‌ಸ್ಟೇಬಲ್‌ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಸಿಕ್ಕಿದ್ದಾರೆ.

ಅನುಮತಿ‌ ಪಡೆದು ಮೂರು ಲಾರಿ ಮುಖಾಂತರ ಮರಳು ಸಾಗಾಣಿಕೆ ನಡೆಸುತ್ತಿದ್ದ ಇರ್ಷಾದ, ಪ್ರತಿ ಲಾರಿಗೆ ಪ್ರತಿ ತಿಂಗಳು 7 ಸಾವಿರ ರೂಪಾಯಿ ನೀಡುವಂತೆ ಪೊಲೀಸರು ಬೇಡಿಕೆ ಇಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕೋಳಿ ಸಾಂಬರ್‌ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ

ದೂರುದಾರ ಇರ್ಷಾದ ಪಟೇಲ್‌ನಿಂದ 21 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚ ಸಮೇತ ಪೊಲೀಸರನ್ನು ಹಿಡಿದಿದ್ದಾರೆ. ಬೀದರ್ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಅಂತರ್ಜಾತಿ ಪ್ರೇಮಿಗಳು ಕಾಣೆ; ಸಹೋದರನ ಆಟೋಗೆ ಬೆಂಕಿ ಹಚ್ಚಿದ ಸವರ್ಣೀಯರು

ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕುಪಿತಗೊಂಡ ಯುವತಿಯ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...