ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

Date:

  • ಏಪ್ರಿಲ್ 1ರ ಒಳಗೆ ಗೊಂದಲ ಇತ್ಯರ್ಥವಾಗಲಿದೆ
  • ವಿವಾದದ ಕುರಿತು ಮೇಲಧಿಕಾರಿ ಗಮನಕ್ಕೆ ತರಲಾಗಿದೆ

ಬೇಲೂರು ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಕುರಾನ್ ಪಠಣ ಮಾಡಬಾರದೆಂದು ಹಿಂದುತ್ವವಾದಿ ಕೋಮು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಥೋತ್ಸವದಲ್ಲಿ ಕುರಾಣ್‌ ಪಠಣ ಸಂಬಂಧ ಉಂಟಾಗಿರುವ ಗೊಂದಲ ಏಪ್ರಿಲ್ 1ರ ಒಳಗೆ ಇತ್ಯರ್ಥ ಆಗಲಿದೆ. ವಿವಾದರಿಂದ ರಥೋತ್ಸವಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಚನ್ನಕೇಶವ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ವಿದ್ಯುಲ್ಲತಾ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡುವುದು ಬೇಡ ಎಂದು ಭಜರಂಗದಳ ಕಾರ್ಯಕರ್ತರು ವಾರದ ಹಿಂದೆ ಮನವಿ ಸಲ್ಲಿಸಿದ್ದಾರೆ. ಈ ವಿಷಯವನ್ನು ಮುಜರಾಯಿ ಇಲಾಖೆ ಆಯುಕ್ತರ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

“ಸೋಮವಾರ ಆಯುಕ್ತರನ್ನು ನೇರವಾಗಿ ಭೇಟಿ ಮಾಡಿ ಎಲ್ಲವನ್ನೂ ಸೂಕ್ಷ್ಮವಾಗಿ ತಿಳಿಸಿ ಅವರ ಗಮನಕ್ಕೆ ತಂದಿದ್ದೇನೆ. ಆಗಮ ಪಂಡಿತರನ್ನು ನಿಯೋಜನೆ ಮಾಡಿಕೊಡಬೇಕೆಂದು ಕೇಳಿದ್ದೇವೆ” ಎಂದು ಹೇಳಿದ್ದಾರೆ.

“ಇದು ಧಾರ್ಮಿಕ ವಿಚಾರ ಆಗಿರುವುದರಿಂದ ಆಗಮಿಕ ಪಂಡಿತರು ವಿವಾದವ್ನು ಬಗೆಹರಸಿಬೇಕಾಗಿದೆ. ಇದಕ್ಕೆ ಆಯುಕ್ತರು ಒಪ್ಪಿಕೊಂಡಿದ್ದು, ಎರಡು – ಮೂರು ದಿನಗಳಲ್ಲಿ ಆಗಮ ಪಂಡಿತರು ಬರುತ್ತಾರೆ” ಎಂದು ತಿಳಿಸಿದ್ದಾರೆ.

“ಎಲ್ಲರನ್ನೂ ಕರೆದು ಸಭೆ ಮಾಡಿ ವರದಿಯನ್ನು ಆಯುಕ್ತರಿಗೆ ಸಲ್ಲಿಸಲಾಗುವುದು, ವರದಿ ಅಧಾರದ ಮೇಲೆ ಏನು ಆದೇಶ ನೀಡುತ್ತಾರೋ ಅದನ್ನು ಪಾಲನೆ ಮಾಡುತ್ತೇವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಬೇಲೂರು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬಂದು ಏಳು ವರ್ಷ ಆಗಿದೆ. ಆಗಿನಿಂದಲೂ ಕುರಾನ್ ಪಠಣ ಸಂಪ್ರದಾಯ ನಡೆಯುತ್ತಿದೆ. ಪ್ರಧಾನ ಅರ್ಚಕರು, 40 ವರ್ಷದಿಂದ ಕೆಲಸ ಮಾಡುತ್ತಿರುವವರ ಜೊತೆ ಸಭೆ ಮಾಡಿದ್ದೇವೆ. 2012 ರಿಂದ ಈಚೆಗೆ ರಥದ ಮುಂದೆ ಕುರಾನ್ ಓದಿಸುತ್ತಿದ್ದೇವೆ. ಅದಕ್ಕಿಂತ ಹಿಂದೆ ಈ ಪದ್ಧತಿ ಇರಲಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ಆರೋಪ; ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು

“ದೇವಸ್ಥಾನದ ಮೆಟ್ಟಿಲ ಬಳಿ ನಿಂತು ಕುರಾನ್ ಓದಿ ಹೋಗುತ್ತಿದ್ದರು ಎಂದು ತಿಳಿಸಿದ್ದಾರೆ. ಈ ವಿಷಯವನ್ನು ಆಯುಕ್ತರ ಗಮನಕ್ಕೆ ತಂದಿದ್ದೇವೆ. 1932ರಲ್ಲಿ ಮ್ಯಾನುಯಲ್ ನಲ್ಲಿ ಎರಡು – ಮೂರು ಕಡೆ ಪ್ರಸ್ತಾಪ ಮಾಡಿದ್ದಾರೆ. ರಥದ ಮುಂದೆ ಕುರಾನ್ ಪಠಣ ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಆದರೆ, ಆಹ್ವಾನ ನೀಡುವಂತೆ ಪುಸ್ತಕದಲ್ಲಿ ಬರೆದಿದ್ದಾರೆ, ಅದರಂತೆ ಆಹ್ವಾನ ಪತ್ರಿಕೆ ಕಳುಹಿಸುತ್ತೇವೆ, ಅವರು ಬರುತ್ತಾರೆ. ಎರಡು ಆಣಿ, ಅಕ್ಕಿ ಕೊಡುವಂತೆ ಪುಸ್ತಕದಲ್ಲಿ ಉಲ್ಲೇಖ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ...

ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ...