ಬೀದರ್‌ | ಕನಸಾಗಿಯೇ ಉಳಿದ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ!

Date:

Advertisements

ಬೀದರ್ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ಜಿಲ್ಲೆಯ ಜನರ ಪಾಲಿಗೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. 2017ರಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲಾ ಸಂಕೀರ್ಣ ನಿರ್ಮಾಣಕ್ಕೆ ₹48 ಕೋಟಿ ರೂ. ಬಿಡುಗಡೆಗೊಳಿಸಿತು. ಸಿಎಂ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಸಹ ನೆರವೇರಿಸಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಏಳು ವರ್ಷ ಕಳೆದರೂ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ಎಂಬುದು ಕನಸಾಗಿಯೇ ಉಳಿದಿದೆ.

2012ರಲ್ಲಿ ಜಿಲ್ಲಾಧಿಕಾರಿಯಾಗಿದ್ದ ಡಾ.ಪಿ.ಸಿ.ಜಾಫರ್‌ ಅವರು ಚಿಕ್ಕಪೇಟ್‌ನಲ್ಲಿ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು. 2013ರಲ್ಲಿ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಆದರೆ ಚಿಕ್ಕಪೇಟ್‌ ತಗ್ಗು ಪ್ರದೇಶವಾಗಿರುವ ಕಾರಣ ಬೇರೆಡೆ ನಿರ್ಮಿಸಬೇಕೆಂಬ ಒತ್ತಡದಿಂದ ಮಾಮನಕೇರಿ ಗುಡ್ಡದ ಮೇಲೆ ನಿರ್ಮಿಸಲು ಜಾಗ ಗುರುತಿಸಲಾಯಿತು. ಆದರೆ ನಗರದ ಹೊರವಲಯದಲ್ಲಿರುವ ಕಾರಣ ಜನರಿಗೆ ಅನುಕೂಲ ಇಲ್ಲ ಎಂಬ ಕಾರಣದಿಂದ ಅದನ್ನೂ ಕೈಬಿಡಲಾಗಿತ್ತು.

ಕೆಲ ವರ್ಷಗಳ ಕಾಲ ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದು, ಸದ್ಯ ಇರುವ ಸ್ಥಳದಲ್ಲಿಯೇ ಕಟ್ಟಡ ಕಾಮಗಾರಿ ಪ್ರಾರಂಭಿಸುವಂತೆ ಅನೇಕ ರಾಜಕೀಯ ಮುಖಂಡರು ಆಗ್ರಹಿಸಿದ್ದರು. 2017ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಈಶ್ವರ ಖಂಡ್ರೆ ಅವರು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಅನೇಕ ಸಭೆಗಳು ನಡೆಸಿದ ಬಳಿಕ ಅಂತಿಮವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಸುತ್ತಲಿನ ವಿವಿಧ ಇಲಾಖೆಗಳ ಕಚೇರಿಗಳ ಒಟ್ಟು 10 ಎಕರೆ ಜಾಗದಲ್ಲಿ ಜಿಲ್ಲಾ ಸಂಕೀರ್ಣ ನಿರ್ಮಾಣಕ್ಕೆ ತೀರ್ಮಾನಗೊಳಿಸಿದ್ದರು.

Advertisements
ಬೀದರ್ 6

₹48.28 ಕೋಟಿ ವೆಚ್ಚದಲ್ಲಿ ನೂತನ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ 2014-15ನೇ ಸಾಲಿನಲ್ಲಿಯೇ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತು. 2017ರ ಆಗಸ್ಟ್‌ 13 ರಂದು ಸಿಎಂ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಸಹ ನೆರೆವೇರಿಸಿದ್ದರು. ಅದಾದ ಬಳಿಕ ಮತ್ತೆ ನನೆಗುದಿಗೆ ಬಿದ್ದಿತ್ತು.

ಬಳಿಕ 2018ರಲ್ಲಿ ಸಮ್ಮಿಶ್ರ ಸರ್ಕಾರ, ನಂತರ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪ್ರಭು ಚವ್ಹಾಣ ಅವರು ಜಿಲ್ಲಾ ಉಸ್ತುವಾರಿ ಮಂತ್ರಿಯಾದರು. ಆವಾಗಲೂ ಜಿಲ್ಲಾ ಸಂಕೀರ್ಣ ಜಾಗ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿತ್ತು. ಈ ಹಿಂದೆ ಗುರುತಿಸಿದ ಜಾಗ ಕೈಬಿಟ್ಟು ನೌಬಾದ್‌ ಹೊರವಲಯದ ರೇಷ್ಮೆ ಇಲಾಖೆಯ 21 ಎಕರೆ ಜಮೀನಿನಲ್ಲಿ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣಕ್ಕೆ ಮನಸ್ಸು ಮಾಡಿದರು. ಆದರೆ ರಾಜಕೀಯ ಜನಪ್ರತಿನಿಧಿಗಳ ಗೊಂದಲದ ನಿರ್ಣಯದಿಂದ ಅದೂ ಕಾರ್ಯಗತವಾಗಲಿಲ್ಲ.

ಆರು ತಿಂಗಳಾದರೂ ಕಾಮಗಾರಿಗೆ ಚಾಲನೆಯಿಲ್ಲ :

ಜಿಲ್ಲೆಯ ಮಹತ್ವದ ಯೋಜನೆಯಾದ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣದ ಕುರಿತು ಕಳೆದ ಒಂದು ದಶಕದಿಂದ ಚರ್ಚೆಯಲ್ಲಿದೆ. ಆದರೆ ಇಲ್ಲಿಯತನಕ ಭರವಸೆಗಳಲ್ಲೇ ದಿನದೂಡಿದ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಇಚ್ಛಾಶಕ್ತಿ ತೋರದೇ ಇರುವುದು ಜಿಲ್ಲೆಯ ಜನರಿಗೆ ಅಸಮಾಧಾನ ಮೂಡಿಸಿದೆ.

2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿರೀಕ್ಷೆಯಂತೆ ಜಿಲ್ಲೆಗೆ ಎರಡು ಸಂಪುಟ ದರ್ಜೆಯ ಮಂತ್ರಿ ಭಾಗ್ಯಯೂ ದೊರೆಯಿತು. 2017ರಲ್ಲಿ ಅಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲಾಡಳಿತದ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಕೂಡ ನೀಡಿದ್ದರು. ಇದೀಗ ಮತ್ತೆ ಅವರದೇ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗಲಾದರೂ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣಕ್ಕೆ ಚಾಲನೆ ಸಿಗಬಹುದೆಂದು ಜನರು ನಿರೀಕ್ಷೆಯಿದೆ. ಆದರೆ ಸರ್ಕಾರ ರಚನೆಯಾಗಿ ವರ್ಷ ಕಳೆದರೂ ಎಂದಿನಂತೆ ಮತ್ತೆ ʼಭರವಸೆʼಯಾಗಿಯೇ ಉಳಿದಿರುವುದು ವಿಪರ್ಯಾಸವೇ ಸರಿ.

WhatsApp Image 2024 08 14 at 5.01.09 PM

2024ರ ಜ.26ರಂದು ಗಣರಾಜೋತ್ಸವ ದಿನದಂದು ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರೆವೇರಿಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ʼಬೀದರ್‌ ನಗರದ ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರಸಭೆ ಕಚೇರಿ ಇರುವ ಸ್ಥಳದಲ್ಲೇ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಅಂದಾಜು ₹100 ಕೋಟಿ ರೂ. ಅನುದಾನದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲಾಗುವುದುʼ ಎಂದು ಹೇಳಿಕೆ ನೀಡಿದ್ದರು.

ʼಸಂಕೀರ್ಣದ ನಿವೇಶನದ ಅಂತಿಮಗೊಳಿಸುವ ಕೆಲಸ ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಂದಾಯ ಇಲಾಖೆಯಿಂದ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಸಿ ವಿನ್ಯಾಸ ಸಿದ್ದಪಡಿಸಲಾಗಿದೆ. ನಗರಸಭೆಯ 2 ಎಕರೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ 3 ಎಕರೆ ಸೇರಿ ಒಟ್ಟು 5 ಎಕರೆ ನಿವೇಶನದಲ್ಲಿ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣವಾಗುತ್ತದೆ’ ಎಂದಿದ್ದರು.

‘ಈ ಹಿಂದೆ ₹48 ಕೋಟಿ ರೂ. ಅನುದಾನ ಇತ್ತು, ಆದರೆ ಸಚಿವ ಸಂಪುಟದಲ್ಲಿ ₹100 ಕೋಟಿ ನೀಡುವಂತೆ ಪ್ರಸ್ತಾವ ಸಲ್ಲಿಸಿದ್ದೇನೆ. ಲೋಕಸಭೆ ಚುನಾವಣೆ ಮುನ್ನವೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ನೂತನ ಸಂಕೀರ್ಣ ಕಟ್ಟಡದಲ್ಲಿ ನಗರಸಭೆ ಕಚೇರಿ ಇರುವುದಿಲ್ಲ. ಈಗಿರುವ ನಗರಸಭೆ ಕಚೇರಿ ಬೇರೆಡೆ ಸ್ಥಳಾಂತರಿಸಲಾಗುವುದುʼ ಎಂದು ಮಾಹಿತಿ ನೀಡಿದ್ದರು. ಆದರೆ, ಅದಾದ ಬಳಿಕ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ.

‘ವಿಧಾನಸಭೆ ಮಾತ್ರವಲ್ಲ 2024ರ ಲೋಕಸಭೆ ಚುನಾವಣೆ ಮುಗಿದು ಮೂರು ತಿಂಗಳು ಕಳೆದಿದೆ. ಅಲ್ಲದೇ, ಬೀದರ್ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆಯವರು ಆಯ್ಕೆಯಾಗಿದ್ದಾರೆ. ಆದರೂ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣದ ಬಗ್ಗೆ ಎಲ್ಲಿಯೂ ಚರ್ಚೆಯೇ ನಡೆಯುತ್ತಿಲ್ಲ ಎಂಬುದು ಮಾತ್ರ ವಾಸ್ತವ.

ʼಬೀದರ್ ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣದ ಬಗ್ಗೆ ಹಿಂದಿನ ಜಿಲ್ಲಾಧಿಕಾರಿ ಸಮೀರ್‌ ಶುಕ್ಲಾ ಅವರಿಂದ ಚರ್ಚೆಯಲ್ಲಿದೆ. ಆದರೆ ಸಂಕೀರ್ಣ ನಿರ್ಮಾಣಕ್ಕೆ ಜಾಗವೇ ಕಗ್ಗಂಟಾಗಿರುವ ಕಾರಣಕ್ಕೆ‌ ದಶಕದಿಂದ ನನೆಗುದಿಗೆ ಬಿದ್ದಿದೆ. ನಗರದಲ್ಲಿ ಮಿತಿಮೀರಿ ಟ್ರಾಫಿಕ್‌ ಹೆಚ್ಚಾಗುತ್ತಿದೆ. ಈಗ ಇರುವ ಜಿಲ್ಲಾಧಿಕಾರಿಗಳ ಕಚೇರಿ ಜಾಗದಲ್ಲೇ ಸಂಕೀರ್ಣ ನಿರ್ಮಿಸಿದರೆ ಮತ್ತೆ ಟ್ರಾಫಿಕ್‌ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ನಗರದ ಹೊರವಲಯದಲ್ಲಿ ಎಲ್ಲಾದರೂ ಸ್ಥಳ ಗುರುತಿಸಿ ಶೀಘ್ರದಲ್ಲೇ ಜಿಲ್ಲಾಡಳಿತ ಸಂಕೀರ್ಣ ನಿರ್ಮಿಸಿ ಜನರ ಮಹತ್ವದ ಕನಸು ಈಡೇರಿಸಬೇಕುʼ ಎಂದು ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಶ್ರೀಕಾಂತ ಸ್ವಾಮಿ ಈ ದಿನ.ಕಾಮ್‌ ಜೊತೆ ಮಾತನಾಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಳೆ ಅವಾಂತರ ಮತ್ತು ಅಧಿಕಾರಸ್ಥರ ಆತುರ

ಈಶ್ವರ ಖಂಡ್ರೆ ಹಾಗೂ ರಹೀಂ ಖಾನ್‌ ಇಬ್ಬರೂ ರಾಜ್ಯ ಸಂಪುಟ ದರ್ಜೆಯ ಸಚಿವರಾಗಿದ್ದಾರೆ. ಈಶ್ವರ ಖಂಡ್ರೆ ಅವರು ಎರಡನೇ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಅವರು ನೀಡುವ ಭರವಸೆಗಳ ಕುರಿತು ಜಿಲ್ಲೆಯ ಜನರು ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇಬ್ಬರು ಮಂತ್ರಿ, ಹಾಗೂ ಸಂಸದರು ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ. ಹೀಗಾಗಿ ಉಸ್ತುವಾರಿ ಸಚಿವರು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲಾಡಳಿತ ಸಂಕೀರ್ಣ ನಿರ್ಮಾಣಕ್ಕೆ ಇಚ್ಛಾಶಕ್ತಿ ತೋರುವರೇ ಎಂಬುದನ್ನು ಜಿಲ್ಲೆಯ ಜನತೆ ಕುತೂಹಲದಿಂದ ಕಾಯುತ್ತಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X