ಕೊಡಗು | ಕನ್ನಡದ ಅಸ್ಮಿತೆ ಉಳಿಸುವಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ಮಹತ್ವದ್ದು: ಬಿ.ಬಿ. ಶಿವಪ್ಪ

Date:

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಬಿ. ಶಿವಪ್ಪ ಅಭಿಪ್ರಾಯಪಟ್ಟರು.

- Advertisement -

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿಯ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ 112ನೇ ಪರಿಷತ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ‘ಪರಿಷತ್ ಸಂಸ್ಥಾಪನೆಯ ಮಹತ್ವ’ ಕುರಿತು ಉಪನ್ಯಾಸ ನೀಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರು ಕೇಳಿದರೆ ಕನ್ನಡಿಗರಲ್ಲಿ ರೋಮಾಂಚನ ಉಂಟಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಅವರ ಚಿಂತನೆಯ ಫಲವಾಗಿ 112 ವರ್ಷಗಳ ಹಿಂದೆ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಯಶಸ್ವಿಯಾಗಿ ನೆರವೇರಿಸಿದೆ. ಕನ್ನಡ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ ಹಾಗೂ ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಪರಿಷತ್ತು ನಿರಂತರವಾಗಿ ಮಾಡುತ್ತಿದೆ ಎಂದು ಹೇಳಿದರು.

ಯುವಜನರು ಸಾಹಿತ್ಯ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಯುವ ಸಮೂಹ ಹೆಚ್ಚು ಸೇರುವ ವಲಯ ಸದಾ ಬೆಳೆಯುತ್ತದೆ. ಆದ್ದರಿಂದ ಯುವಕರನ್ನು ಸಾಹಿತ್ಯದತ್ತ ಆಕರ್ಷಿಸುವ ಕಾರ್ಯ ಅಗತ್ಯವಾಗಿದೆ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, 112 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸುತ್ತಾ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಬಂದಿರುವುದು ಪರಿಷತ್ತಿನ ವಿಶೇಷತೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಅವರ ದೃಢ ಸಂಕಲ್ಪದಿಂದ ರೂಪುಗೊಂಡ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾದ್ಯಂತ ತಾಲೂಕು, ಜಿಲ್ಲಾ, ಹೋಬಳಿ ಹಾಗೂ ಅಖಿಲ ಭಾರತ ಮಟ್ಟದ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುತ್ತಾ ಕನ್ನಡದ ಪ್ರತಿನಿಧಿ ಸಂಸ್ಥೆಯಾಗಿ ಬೆಳೆದಿದೆ ಎಂದು ಹೇಳಿದರು.

ಕನ್ನಡ ನಾಡಿನ ಸೇವೆಗಾಗಿ ಗುರುತಿಸಿಕೊಂಡಿರುವ ಆರು ಮಂದಿ ಹಿರಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮುಲ್ಲೆಂಗಡ ಮಧೋಶ್ ಪೂವಯ್ಯ, ಸಾಹಿತಿ ಹಾಗೂ ಕವಿ ವೈದ್ಯ ಮೇಚಿರ ಸುಭಾಷ್ ನಾಣ್ಯಯ್ಯ, ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಸಾಂದೀಪನಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಟಿ. ದಾಮೋದರ್, ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ ಪತ್ರಕರ್ತ ಡಾ. ಜೆ. ಸೋಮಣ್ಣ, ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡ ಕೆ.ಜಿ. ದಿವಾಕರ್ ಹಾಗೂ ಕೃಷಿಕ-ಕಲಾವಿದ ಎಂ.ಎನ್. ಕಾಳಪ್ಪ ಅವರನ್ನು ಗೌರವಿಸಲಾಯಿತು.

ಗ್ರಾಹಕ ನ್ಯಾಯಾಲಯದ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಈ. ಲೋಕೇಶ್ ಕುಮಾರ್ ಸನ್ಮಾನ ನೆರವೇರಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ನಡೆಸುತ್ತಿದೆ. 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸುಂಟಿಕೊಪ್ಪದಲ್ಲಿ ನಡೆಯಲಿದ್ದು, ಇಡೀ ಊರು ಸಮ್ಮೇಳನದ ಯಶಸ್ಸಿಗೆ ಕೈಜೋಡಿಸಲಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ಗಣ್ಯರು ಕನ್ನಡ ಸೇವೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡು, ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಿಗೆ ಕನ್ನಡ ನಾಡು-ನುಡಿ ಹಾಗೂ ಸಂಸ್ಕೃತಿಯ ಅರಿವು ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಬಿಡುಗಡೆಗೊಳಿಸಿದರು.

ಈ ಸುದ್ದಿ ಓದಿದ್ದೀರಾ?ಮಂಡ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ: ಸಚಿವ ಎನ್. ಚಲುವರಾಯಸ್ವಾಮಿ

ವೇದಿಕೆಯಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹ್ಮದ್, ಪಿ. ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಸೇರಿದಂತೆ ವಿವಿಧ ತಾಲೂಕುಗಳ ಅಧ್ಯಕ್ಷರು, ನಿರ್ದೇಶಕರು, ಸಾಹಿತಿಗಳು, ಸದಸ್ಯರು ಹಾಗೂ ಪರಿಷತ್ತಿನ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...