ರಾಯಚೂರು | ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ವದ್ದು

Date:

  • ಪ್ರತಿಯೊಬ್ಬರು ಪ್ರಜ್ಞಾವಂತರಾಗಲು ಶಿಕ್ಷಕರೇ ಕಾರಣವಾಗಿದ್ದಾರೆ.
  • ಶಿಕ್ಷಕರಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯವಿದೆ.

ಸಮಾಜದಲ್ಲಿ ಗುರುವಿಗೆ ವಿಶೇಷ ಸ್ಥಾನವಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಗತ್ಯವಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಅಭಿಪ್ರಾಯಪಟ್ಟರು.

ನಗರದ ಕಲಾ ಸಂಕುಲ ಸಂಸ್ಥೆಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, “ಪ್ರತಿಯೊಬ್ಬರು ಪ್ರಜ್ಞಾವಂತರಾಗಲು ಶಿಕ್ಷಕರೇ ಕಾರಣವಾಗಿದ್ದಾರೆ. ಸಮಾಜ ಸುಧಾರಣೆ, ಮಾನವೀಯತೆ ಮೌಲ್ಯಗಳ ಬೆಳವಣಿಗೆಗೆ ಶಿಕ್ಷಕರ ಕೊಡುಗೆ ಅಪಾರವಿದೆ. ಪ್ರತಿಭಾವಂತ ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ” ಎಂದು ಹೇಳಿದರು.

ಮುಖಂಡ ಎ.ವಸಂತಕುಮಾರ ಮಾತನಾಡಿ, “ಅಕ್ಷರ ಜ್ಞಾನಕ್ಕೆ ಗುರುಗಳ ಕೊಡುಗೆ ಅಪಾರವಾಗಿದೆ. ಶಿಕ್ಷಕರಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯವಿದೆ. ಅದೇಷ್ಟೋ ಶಿಕ್ಷಕರು ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪವಾಗಿದ್ದಾರೆ. ಶಿಕ್ಷಕರ ದಿನಾಚರಣೆಯಂದು ಶಿಕ್ಷಕರನ್ನು ಗೌರವಿಸುವದು ಸಮಾಜ ಹೊಣೆಗಾರಿಕೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಚ್ಛೇದನ ಪ್ರಕರಣ; ರಾಜಿ ಸಂಧಾನದಿಂದ ಎಂಟು ಜೋಡಿಗಳ ಮರುಮದುವೆ

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಡಾ.ಶರಣಬಸವ ಪಾಟೀಲ್, ನಟಿ ಡಾ.ಮಾಲತಿಗೌಡ, ಫಾತಿಮಾ ಫೌಂಡೇಷನ್ ಅಧ್ಯಕ್ಷೆ ಡಾ.ಫಾತಿಮ ಹುಸೇನ್, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಎಚ್.ವೈ.ಸರಸ್ವತಿ , ರೇಖಾ ಬಡಿಗೇರ್ ಸೇರಿದಂತೆ, ಶಿಕ್ಷಕರು ಉಪಸ್ಥಿತರಿದ್ದರು.

ವರದಿ : ಹಫಿಜುಲ್ಲ, ಸಿಟಿಜನ್ ಜರ್ನಲಿಸ್ಟ್
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ...