‘ಪಾಕ್ ಪರ ಘೋಷಣೆ ಗದ್ದಲ’; ದಾವಣಗೆರೆ ಪಾಲಿಕೆ ಸಭೆಯಲ್ಲೂ ಬಿಜೆಪಿ ಗಲಾಟೆ

Date:

ರಾಜ್ಯಸಭೆ ಚುನಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಅಹ್ಮದ್ ಗೆದ್ದ ಬಳಿಕ, ಅವರ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಮಾಧ್ಯಮಗಳು ಎಬ್ಬಿಸಿದ ಗದ್ದಲ, ರಾಜ್ಯದಲ್ಲಿ ಇನ್ನೂ ಸದ್ದು ಮಾಡುತ್ತಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಈ ವಿಚಾರವಾಗಿ ಗದ್ದಲ ನಡೆದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆದಿದೆ.

- Advertisement -

ಸಾಮಾನ್ಯಸಭೆಗೆ ಮುನ್ನವೇ ಕೈಗೆ ಕಪ್ಪು ಬಟ್ಟೆ ಧರಿಸಿ ಬಿಜೆಪಿ ಸದಸ್ಯರು ಆಗಮಿಸಿದ್ದರು. ನಾಡಗೀತೆ, ರಾಷ್ಟ್ರಗೀತೆ ಹಾಡು ಮುಗಿಯುತ್ತಿದ್ದಂತೆಯೇ, “ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ಈ ನಾಡಿಗೆ ಮಾಡಿದ ದ್ರೋಹ, ಈ ಬಗ್ಗೆ ಖಂಡನಾ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಪಟ್ಟು‌ಹಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆಡಳಿತ ಪಕ್ಷದ ಸದಸ್ಯ ಎ. ನಾಗರಾಜ್ ಹಾಗೂ ಗಡಿಗುಡಾಳ್ ಮಂಜುನಾಥ್ ಮಾತನಾಡಿ, “ಈ ಪ್ರಕರಣ ಇನ್ನು ತನಿಖಾ ಹಂತದಲ್ಲಿದೆ. ಈಗ ಖಂಡನಾ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದಾಗ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ಜೋರಾಯಿತು. ಈ ವೇಳೆ ʼದೇಶದ್ರೋಹಿಗಳನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರʼ ಎಂದು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರೆ, ʼನಾಡಗೀತೆ, ರಾಷ್ಟ್ರಗೀತೆ ಹಾಡುವಾಗ ಕೈಗೆ ಕಪ್ಪು ಬಟ್ಟೆ ಧರಿಸಿದ್ದ ಬಿಜೆಪಿಗರು ರಾಷ್ಟ್ರಗೀತೆಗೆ ಅಪಚಾರ ಎಸಗಿದ್ದಾರೆʼ ಎಂದು ಕಾಂಗ್ರೆಸ್‌ನವರು ಧಿಕ್ಕಾರ ಹೇಳಿದರು. ಹೀಗೆ ಆಡಳಿತ ಹಾಗೂ ವಿಪಕ್ಷದ ಸದಸ್ಯರು ಪರಸ್ಪರ ಧಿಕ್ಕಾರ ಕೂಗಿದರು.

ಮೇಯರ್ ಮುಂಭಾಗದಲ್ಲಿ ಬಂದು ಎರಡೂ ಪಕ್ಷಗಳ ಸದಸ್ಯರು ಎದುರು ಬದುರು ನಿಂತು ಮಾತಿನ ಚಕಮಕಿ ಜೋರಾಗುತ್ತಿದ್ದಂತೆ ಯಾರು ಏನು ಮಾತನಾಡುತ್ತಿದ್ದಾರೆಂದು ತಿಳಿಯದೆ ಗೊಂದಲವಾಯಿತು. ಈ ವೇಳೆ ಮೇಯರ್ ಐದು ನಿಮಿಷ ಸಭೆ ಮುಂದೂಡಿದರು.

ಸಭೆ ಮತ್ತೆ ಆರಂಭವಾಗುತ್ತಿದ್ದಂತೆ ಆರಂಭದಲ್ಲಿ ಈ ವಿಷಯ ಪ್ರಸ್ತಾಪವಾಯಿತು. ಕಾಂಗ್ರೆಸ್ ಸದಸ್ಯ ಕೆ. ಚಮನ್ ಸಾಬ್ ಮಾತನಾಡಿ, “ಯಾರೇ ತಪ್ಪು ಮಾಡಿದ್ದರೂ ತಪ್ಪೇ. ಈ ನೆಲದ ಅನ್ನ, ನೀರು ಕುಡಿದವರು ಪಾಕಿಸ್ತಾನಕ್ಕೆ ಜೈ ಎಂಬ ಘೋಷಣೆ ಕೂಗಿದ್ದು ಅಕ್ಷಮ್ಯ ಅಪರಾಧ. ಗುಂಡಿಟ್ಟು ಹೊಡೆಯಲಿ. ರಾಜ್ಯಸಭೆ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಬಿಜೆಪಿಯವರೇ ಪಿತೂರಿ ನಡೆಸಿರಬಹುದೆಂಬ ಅನುಮಾನವೂ ಮೂಡುತ್ತದೆ” ಎಂದು ಹೇಳಿದ್ದಾರೆ.

ಈ ವೇಳೆ ಬಿಜೆಪಿ ಸದಸ್ಯರು‌, “ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವವರಿಗೆ ಆಡಳಿತ ಪಕ್ಷ ಕಾಂಗ್ರೆಸ್ ಬೆಂಬಲ ನೀಡುತ್ತಿದೆ” ಎಂದು ಕಿಡಿಕಾರಿದರು.

ಬಳಿಕ ಆಡಳಿತ ಪಕ್ಷದ ಎ. ನಾಗರಾಜ್ ಮಾತನಾಡಿ, “ಚಮನ್ ಸಾಬ್ ಅವರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದೇ ಆಗಿದ್ದರೆ ಅವರಿಗೆ ನಮ್ಮದೂ ಧಿಕ್ಕಾರವಿರಲಿ. ಕಾನೂನು ಕ್ರಮ ಆಗಲಿ. ಇದಕ್ಕೆ ನಮ್ಮ ಬೆಂಬಲವಿದೆ. ದೇಶದ್ರೋಹಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳುತ್ತಿದ್ದಂತೆ ಎಲ್ಲರೂ ಪ್ರಕರಣಕ್ಕೆ ಅಂತ್ಯ ಹಾಡಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ʼನಮ್ಮ ನಡಿಗೆ ಮಾದಕ ಮುಕ್ತ ಸಮಾಜದ ಕಡೆಗೆʼ ಜಾಗೃತಿ ಕಾರ್ಯಕ್ರಮ

ಸಭೆಯಲ್ಲಿ ಮೇಯರ್ ವಿನಾಯಕ್ ಪೈಲ್ವಾನ್, ಉಪಮೇಯರ್ ಯಶೋಧಾ, ಆಯುಕ್ತೆ ರೇಣುಕಾ ಸೇರಿದಂತೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...