ಹಣ ಕೊಡದಿದ್ದಕ್ಕೆ ಮಗನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಧಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. 65 ವರ್ಷದ ರೇಣುಕಯ್ಯ ಕೊಲೆಯಾದ ವ್ಯಕ್ತಿ.
ಆರೋಪಿ ರಮೇಶ್, ತನ್ನ ತಂದೆಯ ಬಳಿ 1,000 ರೂ. ಕೊಡುವಂತೆ ಕೇಳಿದ್ದಾನೆ. ಹಣಕೊಡಲು ತಂದೆ ರೇಣುಕಯ್ಯ ನಿರಾಕರಿಸಿದ್ದಾರೆ. ಇದರಿಂದ ಉದ್ರಿಕ್ತಗೊಂಡ ರಮೇಶ್ ಮಚ್ಚಿನಿಂದ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿದ್ದರಿಂದ ರೇಣುಕಯ್ಯ, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.