ಕುರುಬ ಸಮಾಜದ ಎಸ್‌ಟಿ ಹೋರಾಟಕ್ಕೆ ವೇಗ; ದೆಹಲಿಯಲ್ಲಿ ಪ್ರತಿಭಟನೆಗೆ ನಿರ್ಧಾರ

Date:

ರಾಜ್ಯದಲ್ಲಿ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸಬೇಕೆಂಬ ಕೂಗು ಜೋರಗಿದ್ದು, ದೆಹಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕುರುಬ ಸಮಾಜ ಎಸ್‌ಟಿ ಹೋರಾಟ ಸಮಿತಿಯು ನಿರ್ಧರಿಸಿದೆ.

- Advertisement -

ಸಮಿತಿಯ ಅಧ್ಯಕ್ಷ ಸಿದ್ದನ್ನಾ ತೇಜಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಶಾಸಕರ ಭವನದಲ್ಲಿ ಮಹತ್ವದ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕುರುಬರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯದಿಂದ ಕೆಲವು ದಾಖಲೆಗಳ ಮಾಹಿತಿ ಕೇಳಿದರೂ, ಕಳೆದ ಏಳು ತಿಂಗಳಿನಿಂದ ರಾಜ್ಯ ಸರ್ಕಾರ ಅದನ್ನು ಒದಗಿಸದೆ ವಿಳಂಬ ಮಾಡುತ್ತಿದೆ ಎಂದು ಸಮಿತಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ರಾಜ್ಯ ಸರ್ಕಾರ ತ್ವರಿತವಾಗಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಿ, ಕುರುಬರನ್ನು ಎಸ್‌ಟಿ ವರ್ಗಕ್ಕೆ ಸೇರಿಸುವ ಶಿಫಾರಸು ಮಾಡಬೇಕು. ವಿಳಂಬ ಮಾಡಿದರೆ, ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದ ಸಮಯದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುವುದು. ಇದಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ 20 ರಿಂದ 25 ಸಾವಿರ ಜನರನ್ನು ದೆಹಲಿಗೆ ಕರೆದುಕೊಂಡು ಹೋಗುವ ಯೋಜನೆ ರೂಪಿಸಲಾಗಿದೆ” ಎಂದು ಸಭೆಯಲ್ಲಿ ಸಿದ್ದನ್ನಾ ತೇಜಿ ತಿಳಿಸಿದ್ದಾರೆ.

ಸಭೆ ನಡೆಯುತ್ತಿದ್ದ ವೇಳೆ ಮುಖ್ಯಮಂತ್ರಿಗಳು ಸಮಿತಿಯನ್ನು ಭೇಟಿ ಮಾಡಲು ಆಹ್ವಾನಿಸಿದ ಪರಿಣಾಮ, ಹೋರಾಟಗಾರರ ಪ್ರತಿನಿಧಿ ಮಂಡಳಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದಿಂದ ಕೇಂದ್ರಕ್ಕೆ ಮಾಹಿತಿ ಕಳುಹಿಸುವ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

ಈ ಸಭೆಗೆ ರಾಜ್ಯದ 30 ಜಿಲ್ಲೆಗಳಿಂದ ಪದಾಧಿಕಾರಿಗಳು ಹಾಗೂ ಹೋರಾಟಗಾರರು ಭಾಗವಹಿಸಿದ್ದರು. ಸಮಿತಿಯ ಬೆಳಗಾವಿ ಸಂಚಾಲಕ ತೇಜಿ ಟಿವಿ, ಬಿಬಿಎಂಪಿ ಸದಸ್ಯ ಸೋಮಶೇಖರ್, ರಾಜಕುಮಾರ್, ಮಾಳಿಂಗರಾಯ, ಅಪ್ಪಾಜಿ, ಸಂತೋಷ್ ಪೂಜಾರಿ, ಕಾರ್ಯದರ್ಶಿ ರವಿರಾಜ್ ಕಂಬಳಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...