ಧಾರವಾಡ | ರೈತಪರ ಯೋಜನೆಗಳು ರದ್ದುಪಡಿಸಿ ಅನ್ಯಾಯ; ಬಿಜೆಪಿ ಶಾಸಕ ಆರೋಪ

Date:

  • ಬಿಟ್ಟಿಭಾಗ್ಯಗಳಿಂದ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರ ಜನರ ಹಾದಿ ತಪ್ಪಿಸುತ್ತಿದೆ
  • ಬರಗಾಲ ಘೋಷಿಸಿ ರೈತರಿಗೆ ನೆರವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು.

ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ ಸಂಪೂರ್ಣ ಬೇಜವಾಬ್ದಾರಿಯಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತ ಸಂಕಷ್ಟದಲ್ಲಿದ್ದಾನೆ ಎಂದು ಬಿಜೆಪಿ ಶಾಸಕ ಎಮ್.ಆರ್.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಕುಂದಗೋಳ ತಾಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶೀಲ್ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಅವರು ಮಾತನಾಡಿದರು. “ಈ ನಡುವೆ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ಕೃಷಿಕರು ಹೈರಾಣಾಗಿದ್ದಾರೆ. ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲು ಪಂಪ್ ಸೆಟ್ ಗಳಿಗೆ ವಿದ್ಯುತ್ ಇಲ್ಲದೇ ರೈತ ಸಂಕಷ್ಟ ಅನುಭವಿಸುವಂತಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ ಅವಧಿಯಲ್ಲಿ ರೈತರಿಗಾಗಿ ಜಾರಿಗೊಳಿಸಿದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಸಿರಿ, ಶ್ರಮ ಶಕ್ತಿ, ರೈತ ಸಂಪದ ಸೇರಿದಂತೆ ಇನ್ನಿತರ ಯೋಜನೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಬಿಟ್ಟಿಭಾಗ್ಯಗಳನ್ನು‌ ಕೊಟ್ಟು ಜನರನ್ನು ಹಾದಿತಪ್ಪಿಸುತ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯಿಂದ ರೈತನ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಬೇಕು, ರೈತರಿಗೆ ನೆರವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು” ಒತ್ತಾಯಿಸಿದರು.

ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸೆ.14ರಂದು ಕುಂದಗೋಳ ಬಂದ್‌ಗೆ ರೈತ ಸಂಘ ಕರೆ

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಘವೇಂದ್ರಗೌಡ ಪಾಟೀಲ್, ಮಂಡಲ ಅಧ್ಯಕ್ಷ ರವಿಗೌಡ ಪಾಟೀಲ್, ತಾಲೂಕ ರೈತ ಮೋರ್ಚಾ ಅಧ್ಯಕ್ಷ ಚನ್ನಪ್ಪ ಹರಕುಣಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ,ಮುಖಂಡರು ಕಾರ್ಯಕರ್ತರು, ರೈತರು ಉಪಸಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...