ಕೊಡಗು | ಸಣ್ಣ ಭಾಷೆಗಳ ಉಳಿವೇ ಕನ್ನಡದ ಶ್ರೀಮಂತಿಕೆ: ಅಬ್ದುಲ್ ರಶೀದ್

Date:

ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಬೆಳವಣಿಗೆಯ ಹಿಂದೆ ಕರ್ನಾಟಕದ ವಿವಿಧ ಸಣ್ಣ ಭಾಷೆಗಳ ಕೊಡುಗೆ ಮಹತ್ತರವಾಗಿದೆ ಎಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು.

- Advertisement -

ಸುಂಟಿಕೊಪ್ಪದ ಎಸ್.ಎಸ್. ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗನ್ನು ‘ಕರ್ನಾಟಕದ ಕಾಶ್ಮೀರ’ ಎಂದು ಕರೆಯುವುದು ಸಮಂಜಸವಲ್ಲ ಎಂದು ಹೇಳಿದರು. ಕೊಡಗಿನ ನೆಲ, ಸಂಸ್ಕೃತಿ, ದೇವರ ಕಾಡುಗಳು, ಜನಪದ ಪರಂಪರೆ ಮತ್ತು ವೈವಿಧ್ಯಮಯ ಭಾಷಾ ಸಂಸ್ಕೃತಿಯೇ ಅದರ ವೈಶಿಷ್ಟ್ಯವಾಗಿದ್ದು, ಪ್ರವಾಸಿಗರಿಗೆ ಈ ಕುರಿತು ಅರಿವು ಮೂಡಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೊಡಗಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಲ್ಲೇಖಿಸಿದ ಅವರು, ಪಂಜೆ ಮಂಗೇಶರಾಯ, ಭಾರತೀಸುತ, ಜಿ.ಟಿ. ನಾರಾಯಣರಾಯ, ಬಿ.ಡಿ. ಗಣಪತಿ, ಐ.ಮಾ. ಮುತ್ತಣ್ಣ ಸೇರಿದಂತೆ ಅನೇಕ ಸಾಹಿತ್ಯ ದಿಗ್ಗಜರ ಕೊಡುಗೆಯನ್ನು ಸ್ಮರಿಸಿದರು. ಅವರ ಕೃತಿಗಳ ಮರುಮುದ್ರಣ ಹಾಗೂ ಬದುಕು-ಬರಹಗಳ ಕುರಿತು ವಸ್ತು ಸಂಗ್ರಹಾಲಯ ಸ್ಥಾಪಿಸುವ ಅಗತ್ಯವಿದೆ ಎಂದು ಹೇಳಿದರು.

ಕೊಡವ, ಅರೆಭಾಷೆ, ಜೇನುಕುರುಬ, ಬೆಟ್ಟಕುರುಬ, ಯರವ, ಪಣಿಯ, ಅಡಿಯ ಸೇರಿದಂತೆ ಹಲವಾರು ಸಣ್ಣ ಭಾಷೆಗಳು ಕೊಡಗಿನ ಸಾಂಸ್ಕೃತಿಕ ಸಂಪತ್ತಾಗಿವೆ. ಈ ಭಾಷೆಗಳ ಸಂರಕ್ಷಣೆ ಮತ್ತು ಅವುಗಳ ಬಗ್ಗೆ ಮಕ್ಕಳಲ್ಲಿ ಹೆಮ್ಮೆ ಹಾಗೂ ಆಸಕ್ತಿ ಮೂಡಿಸುವ ಕಾರ್ಯ ನಡೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಆದಿವಾಸಿ ಸಮುದಾಯಗಳ ಶಿಕ್ಷಣ, ಸಾಂಸ್ಕೃತಿಕ ಅಭಿವೃದ್ಧಿ ಮತ್ತು ಭಾಷಾ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕಿದ್ದು, ಆಧುನಿಕ ಡಿಜಿಟಲ್ ಮಾಧ್ಯಮಗಳ ಮೂಲಕ ಅಪರೂಪದ ಕಲಾ ಪರಂಪರೆ ಹಾಗೂ ಭಾಷಾ ಸಂಪತ್ತನ್ನು ದಾಖಲಿಸಿ ಉಳಿಸಬಹುದಾಗಿದೆ ಎಂದು ತಿಳಿಸಿದರು.

ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಡಾ. ತೀತಿರ ರೇಖಾ ವಸಂತ್ ಮಾತನಾಡಿ, ಕನ್ನಡ ಭಾಷೆಗೆ ನಾಡಿನಲ್ಲಿ ಪ್ರಥಮ ಆದ್ಯತೆ ಇದ್ದು ಆತಂಕಪಡುವ ಅಗತ್ಯವಿಲ್ಲ. ಕನ್ನಡದ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಪ್ರೀತಿ ಇರಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, ಜಿಲ್ಲೆಯಾದ್ಯಂತ ಸಾಹಿತ್ಯ ಚಟುವಟಿಕೆಗಳನ್ನು ಉತ್ತೇಜಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಸಮ್ಮೇಳನದ ಅಂಗವಾಗಿ 19 ದ್ವಾರಗಳನ್ನು ನಿರ್ಮಿಸಿ ಸ್ಥಳೀಯ ಸಾಹಿತಿಗಳು ಮತ್ತು ಕನ್ನಡ ಸೇವಕರನ್ನು ಸ್ಮರಿಸಲಾಗಿದೆ ಎಂದು ತಿಳಿಸಿದರು.

ಈ ವಿಡಿಯೋ ವೀಕ್ಷಿಸಿ:https://youtu.be/AZ7t09oFqBM?si=zbu7mUsSm2Z7zX6L

ಸಮ್ಮೇಳನದಲ್ಲಿ ಇ. ಸುಲೇಮಾನ್ ಅವರ ‘ರಾಗವಿಲ್ಲದ ಕವಿತೆ’, ಎಚ್. ಮಂಜುನಾಥ್ ಅವರ ‘ಮನುಷತ್ವದ ಸಾರ’, ಜಯಪ್ರಕಾಶ್ ಪುತ್ತೂರು ಅವರ ‘ವ್ಯಕ್ತಿತ್ವ ವಿಕಸನದ ವಿಚಾರಧಾರೆ’, ಡಾ. ಬೆಸೂರು ಮೋಹನ್ ಪಾಳೇಗಾರ್ ಅವರ ‘ಸ್ವಾತಂತ್ರ್ಯ ಕ್ರಾಂತಿಯ ಕಿಡಿ’, ಗಣೇಶ್ ಶರ್ಮ ಅವರ ‘ಮಕ್ಕಳ ಕಥೆ’ ಹಾಗೂ ಹೇಮಂತ್ ಪಾರೇರ ಅವರ ‘ಸ್ವಪ್ನದ ಹಕ್ಕಿ’ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಹಲವು ಗಣ್ಯರನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ?ನಾಳೆ ಮೈಸೂರು ಅರಮನೆ ಅಂಗಳದಲ್ಲಿ ಯೋಗಾಭ್ಯಾಸ

ಸಮ್ಮೇಳನದಲ್ಲಿ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಸಾಹಿತಿ ಎಂ.ಜಿ. ನಾಗರಾಜು, ವಿ.ಪಿ. ಶಶಿಧರ, ಬಿ.ಎಸ್. ಲೋಕೇಶ್ ಸಾಗರ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...