ಪ್ರವೀಣ್‌ ನೆಟ್ಟಾರು ಪತ್ನಿಗೆ ಬೊಮ್ಮಾಯಿ ಸರ್ಕಾರ ನೀಡಿದ್ದ ತಾತ್ಕಾಲಿಕ ಹುದ್ದೆ ರದ್ದು

Date:

Advertisements
  • ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ
  • ಸಿಎಂ ಸಚಿವಾಲಯದ ಹಿರಿಯ ಸಹಾಯಕಿ(ಗ್ರೂಪ್‌ ಸಿ) ಹುದ್ದೆಗೆ ನೇಮಿಸಲಾಗಿತ್ತು

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಬೊಮ್ಮಾಯಿ ಸರ್ಕಾರ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗವನ್ನು ರದ್ದು ಮಾಡಲಾಗಿದೆ.

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ನೂತನ ಅವರ ನೇಮಕಾತಿಯನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ರದ್ದು ಮಾಡಿದೆ.

ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಅಲ್ಲದೆ, ಅಂದಿನ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶದವರೆಗೆ ಎಂದು ನೇಮಕಾತಿ ಚಾಲ್ತಿಯಲ್ಲಿರುತ್ತದೆ ಎಂದು ಹೇಳಲಾಗಿತ್ತು.

Advertisements

ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುಂಡು, ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ, ನೂತನ ಕುಮಾರಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ.

ಈ ಸುದ್ದಿ ಓದಿದ್ದೀರಾ? ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಕಾಂಗ್ರೆಸ್‌ ನೇತೃತ್ವದ ಹೊಸ ಸರ್ಕಾರವು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X