ರಸ್ತೆ ಕಾಮಗಾರಿ ವಿಳಂಬ ನಮಗೆಲ್ಲ ಧೂಳಿನ ಭಾಗ್ಯ ಗ್ರಾಮಸ್ಥರ ಆರೋಪ

Date:

ಕೋಲಾರ: ತಾಲೂಕಿನ ನರಸಾಪುರ ಗ್ರಾಮದಲ್ಲಿನ ಬೆಂಗಳೂರು-ಕೋಲಾರದ ಮುಖ್ಯ ರಸ್ತೆಯ ಕಾಮಗಾರಿ ಪ್ರಾರಂಭವಾಗಿ ಸುಮಾರು ದಿನಗಳಾದರೂ ಕಾಮಗಾರಿ ಮುಗಿಸಿಲ್ಲ ಎಂದು ನರಸಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ನರಸಾಪುರ ಗ್ರಾಮ ಸದಸ್ಯ ಕೆಇಬಿ ಚಂದ್ರು ಮಾತನಾಡಿ ಕಾಮಗಾರಿ ಪ್ರಾರಂಭ ಮಾಡಿ ಸುಮಾರು 8 ತಿಂಗಳು ಆಗಿದ್ದರೂ ಇದುವರೆಗೂ ಗುತ್ತಿಗೆಯದಾರು ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ ಪೂರ್ಣಗೊಳಿಸುವಂತೆ ಒತ್ತಾಯ ಮಾಡಿದರು ಕಾಲಹರಣ ಮಾಡುತ್ತಾ ನಮಗೆ ಧೂಳಿನ ಭಾಗ್ಯ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನರಸಾಪುರ ಕೈಗಾರಿಕಾ ಪ್ರದೇಶವಾಗಿರುವುದರಿಂದ ಜನಸಂಖ್ಯೆ ಹೆಚ್ಚಾಗಿದೆ ಕೈಗಾರಿಕಾ ಪ್ರದೇಶಕ್ಕೆ ಓಡಾಡುವ ಬೃಹತ್ ಪ್ರಮಾಣದ ವಾಹನಗಳು ಹಾಗೂ ಇತರೆ ಎಲ್ಲಾ ರೀತಿಯ ಸಾವಿರಾರು ವಾಹನಗಳು ಇದೇ ರಸ್ತೆಯ ಮೂಲಕ ಪ್ರತಿನಿತ್ಯ ಓಡಾಡುವುದರಿಂದ ರಸ್ತೆಯ ಮೇಲಿರುವ ದೂಳು ಚಿಮಣಿಯಿಂದ ಬರುವ ಹೊಗೆಯ ರೀತಿಯಲ್ಲಿ ಬರುತ್ತದೆ ಇದರಿಂದ ರಸ್ತೆಯ ಪಕ್ಕದಲ್ಲಿನ ಅಂಗಡಿಗಳ ವ್ಯಾಪಾರಿಗಳಿಗೆ ತೊಂದರೆಯಾಗಿದೆ ಗುತ್ತಿಗೆದಾರನು ಅನೇಕ ಕಾರಣಗಳನ್ನು ನೀಡಿ ವಿಳಂಬ ಮಾಡುತ್ತಾ ಬರುತ್ತಿದ್ದಾರೆ ರಸ್ತೆಗೆ ಧೂಳು ಹೇಳದಂತೆ ಸರಿಯಾಗಿ ನೀರನ್ನು ಸಹ ಹಾಕುತಿಲ್ಲ ಧೂಳು ಮುಕ್ತ ನರಸಾಪುರ ಗ್ರಾಮ ಮಾಡಬೇಕೆಂದು ರಸ್ತೆಗೆ ಡಾಂಬರನ್ನು ಕೂಡಲೇ ಹಾಕಬೇಕೆಂದು ಆಗ್ರಹಿಸಿದರು.

ತಾಪಂ ಮಾಜಿ ಸದಸ್ಯ ಎನ್. ಕೆ. ನಾಗರಾಜ್ ಮಾತನಾಡಿ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ಹಾಗೂ ಗುತ್ತಿಗೆದಾರನ ಬಳಿ ಹೋದರು ಏನು ಪ್ರಯೋಜನವಾಗಿಲ್ಲ ಇದೇ ರಸ್ತೆಯಲ್ಲಿ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಹೋಗಬೇಕಾಗಿದ್ದು ಈ ರಸ್ತೆಯಲ್ಲಿನ ಧೂಳಿನ ಪ್ರಭಾವದಿಂದ ವಿದ್ಯಾರ್ಥಿಗಳ ಪೋಷಕರು ಸರ್ಕಾರಿ ಶಾಲೆಗೆ ಕಳುಹಿಸಲು ಆತಂಕ ವ್ಯಕ್ತಪಡಿಸಿದ್ದಾರೆ ಆದಷ್ಟು ಬೇಗನೆ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಒತ್ತಾಯಿಸಿದರು.

ಗುತ್ತಿಗೆದಾರ ಚಂಬೆ ನಾರಾಯಣಸ್ವಾಮಿ ಪ್ರತಿಭಟನೆ ಸ್ಥಳಕ್ಕೆ ಬಂದು ಮಾತನಾಡಿ ಕೆಲವೊಂದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು ಮುಂದಿನ ಮಂಗಳವಾರ ಅಥವಾ ಬುಧವಾರದ ಒಳಗೆ ರಸ್ತೆಗೆ ಡಾಂಬರು ಹಾಕಿ ಕಾಮಗಾರಿಯನ್ನು ಮುಕ್ತಾಯಗೊಳಿಸಿಕೊಡಲಾಗುತ್ತದೆ ಇಂಜಿನಿಯರ್ ಯಾವ ರೀತಿ ಪ್ಲಾನ್ ಹಾಕಿದ್ದಾರೆ ಅದರಂತೆ ಕೆಲಸ ಮಾಡಲಾಗುತ್ತದೆ ಎಂದರು.

ನರಸಾಪುರ ಗ್ರಾಮದ ಎಲ್ಲಾ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆಗೆ ಸಹಕಾರ ನೀಡಿದರು ಸ್ಥಳದಲ್ಲಿ ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಗದೀಶ್ ಇದ್ದರು.

ಇದನ್ನು ಓದಿದ್ದೀರಾ..? ಸ್ವಾತಂತ್ರ್ಯಕ್ಕಾಗಿ ಆರ್.ಎಸ್.ಎಸ್ ಕೊಡುಗೆ ಶೂನ್ಯ ಇದ್ದರೆ ಬಹಿರಂಗ ಪಡಿಸಲಿ

ಪ್ರತಿಭಟನೆಯಲ್ಲಿ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ, ದಲಿತ ಸಂಘಟನೆ ಮುಖಂಡ ಪುರಹಳ್ಳಿ ಯಲ್ಲಪ್ಪ, ನರಸಾಪುರ ಗ್ರಾಮದ ಮುಖಂಡರುಗಳಾದ ಕುಮಾರ್, ಬಿ ಶ್ರೀನಿವಾಸ್, ಎನ್.ಪಿ ಶ್ರೀನಿವಾಸ್, ಭಾನುಪ್ರಕಾಶ್, ಓಂ ಪ್ರಕಾಶ್, ಗೋಪಿ, ಸುಮನ್, ಮುನಿರಾಜು ಸತೀಶ್, ಶೇಖರ್, ರಾಜೇಂದ್ರ, ಎಲ್. ನಾಗರಾಜ್ ಪಾನಿಪುರಿ ವೆಂಕಟೇಶ್, ಟಿ ಬಾಬು, ಕೃಷ್ಣಪ್ಪ, ಟಿಪ್ಪು, ಉಮೇಶ್, ವರ್ತಕರ ಸಂಘದ ಪದಾಧಿಕಾರಿಗಳು, ಅಂಗಡಿಗಳ ಮಾಲೀಕರಗಳು ಹಾಗೂ ನೂರಾರು ಮುಖಂಡರುಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...