ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

Date:

Advertisements
  • ಗ್ರಾಮದಲ್ಲಿ 1,000 ಎಕರೆ ಕಾಫಿ ತೋಟ ಹೊಂದಿರುವ ತಮಿಳುನಾಡಿನ ವ್ಯಕ್ತಿ
  • ಮೂಲ ಸೌಕರ್ಯವಿಲ್ಲದ್ದರಿಂದ ವಿವಾಹ ಸಂಬಂಧ ಬೆಳೆಸಲು ಮುಂದಾಗದ ಜನ

ರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಿಧಾನಸಭಾ ಚುನಾವಣೆ ಬಹಿಷ್ಕರಿಸಲು ಕಾಡಂಚಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೋನಹಳ್ಳಿ ಗ್ರಾಮಗಳು ಹೋಬಳಿ ಕೇಂದ್ರದಿಂದ ಕೇವಲ 5 ಕಿ.ಮೀ ದೂರದಲ್ಲಿವೆ. ಅದರೂ, ಗ್ರಾಮಕ್ಕೆ ಸುಸಜ್ಜಿತ ರಸ್ತೆ ಇಲ್ಲ. ಕಲ್ಲುಮಣ್ಣಿನ ರಸ್ತೆಯಲ್ಲಿ ನಿತ್ಯ ಓಡಾಡಬೇಕಿದ್ದು, ಪಟ್ಟಣಕ್ಕೆ ಬರಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲದ ಕಾರಣ ಇಲ್ಲಿನ ನಿವಾಸಿಗಳೊಂದಿಗೆ ವಿವಾಹ ಸಂಬಂಧ ಬೆಳೆಸಲು ಯಾರೂ ಬರುವುದಿಲ್ಲ. ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಲು ಜೀಪುಗಳನ್ನು ಆಶ್ರಯಿಸಬೇಕಾಗಿದೆ. ಜೀಪುಗಳಿಲ್ಲದಿದ್ದರೆ ವಿದ್ಯಾರ್ಥಿಗಳು ನಡೆದುಕೊಂಡೆ ಹೋಗಬೇಕಾಗುತ್ತದೆ ಎಂದು ಸಮಸ್ಯೆ ವಿವರಿಸಿದರು.

Advertisements

ಮಳೆಗಾಲದ ಸಂದರ್ಭದಲ್ಲಿ ದೋನಹಳ್ಳಿ ಗ್ರಾಮಸ್ಥರು ಹೆಚ್ಚು ಸಮಸ್ಯೆ ಅನುಭವಿಸಬೇಕಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ದೋನಹಳ್ಳಿ ಮತ್ತು ಬಾಚನಹಳ್ಳಿ ಎರಡೂ ಗ್ರಾಮಗಳಲ್ಲಿ ಅಂದಾಜು 500ಕ್ಕೂ ಹೆಚ್ಚು ಜನಸಂಖ್ಯೆ ಇದೆ. ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಸಕಲೇಶಪುರ ಕ್ಷೇತ್ರದ ಶಾಸಕ ಎಚ್‌ ಕೆ ಕುಮಾರಸ್ವಾಮಿ ಅವರಿಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದರು ಯಾವುದೆ ಪ್ರಯೋಜನವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ರೈತ, ದಲಿತ, ಆದಿವಾಸಿಗಳ ಬೃಹತ್‌ ಸಮಾವೇಶ

ಗ್ರಾಮದಲ್ಲಿ ತಮಿಳುನಾಡಿನ ವ್ಯಕ್ತಿಯೋಬ್ಬ ಸುಮಾರು 1,000 ಎಕರೆ ಕಾಫಿ ತೋಟ ಹೊಂದಿದ್ದು, ಯಾವುದೇ ಅಭಿವೃದ್ಧಿಗೆ ಕೈಜೋಡಿಸುತ್ತಿಲ್ಲ. ಈ ಎರಡು ಗ್ರಾಮಗಳ ಯುವಕರಿಗೆ ರಸ್ತೆ ಅವ್ಯವಸ್ಥೆ ಹಿನ್ನೆಲೆ ಹೆಣ್ಣು ಮಕ್ಕಳನ್ನು ಕೊಡಲು ಪೋಷಕರು ಮುಂದಾಗದ ಕಾರಣ ಹಲವರು ಇನ್ನು ಅವಿವಾಹಿತರಾಗಿದ್ದಾರೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X