ಹಾಸನ | ಮೂಲ ಸೌಕರ್ಯಗಳಿಗೆ ಆಗ್ರಹ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

Date:

  • ಗ್ರಾಮದಲ್ಲಿ 1,000 ಎಕರೆ ಕಾಫಿ ತೋಟ ಹೊಂದಿರುವ ತಮಿಳುನಾಡಿನ ವ್ಯಕ್ತಿ
  • ಮೂಲ ಸೌಕರ್ಯವಿಲ್ಲದ್ದರಿಂದ ವಿವಾಹ ಸಂಬಂಧ ಬೆಳೆಸಲು ಮುಂದಾಗದ ಜನ

ರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಿಧಾನಸಭಾ ಚುನಾವಣೆ ಬಹಿಷ್ಕರಿಸಲು ಕಾಡಂಚಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು ನಿರ್ಧರಿಸಿದ್ದಾರೆ.

- Advertisement -

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೋನಹಳ್ಳಿ ಗ್ರಾಮಗಳು ಹೋಬಳಿ ಕೇಂದ್ರದಿಂದ ಕೇವಲ 5 ಕಿ.ಮೀ ದೂರದಲ್ಲಿವೆ. ಅದರೂ, ಗ್ರಾಮಕ್ಕೆ ಸುಸಜ್ಜಿತ ರಸ್ತೆ ಇಲ್ಲ. ಕಲ್ಲುಮಣ್ಣಿನ ರಸ್ತೆಯಲ್ಲಿ ನಿತ್ಯ ಓಡಾಡಬೇಕಿದ್ದು, ಪಟ್ಟಣಕ್ಕೆ ಬರಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲದ ಕಾರಣ ಇಲ್ಲಿನ ನಿವಾಸಿಗಳೊಂದಿಗೆ ವಿವಾಹ ಸಂಬಂಧ ಬೆಳೆಸಲು ಯಾರೂ ಬರುವುದಿಲ್ಲ. ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಲು ಜೀಪುಗಳನ್ನು ಆಶ್ರಯಿಸಬೇಕಾಗಿದೆ. ಜೀಪುಗಳಿಲ್ಲದಿದ್ದರೆ ವಿದ್ಯಾರ್ಥಿಗಳು ನಡೆದುಕೊಂಡೆ ಹೋಗಬೇಕಾಗುತ್ತದೆ ಎಂದು ಸಮಸ್ಯೆ ವಿವರಿಸಿದರು.

ಮಳೆಗಾಲದ ಸಂದರ್ಭದಲ್ಲಿ ದೋನಹಳ್ಳಿ ಗ್ರಾಮಸ್ಥರು ಹೆಚ್ಚು ಸಮಸ್ಯೆ ಅನುಭವಿಸಬೇಕಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ದೋನಹಳ್ಳಿ ಮತ್ತು ಬಾಚನಹಳ್ಳಿ ಎರಡೂ ಗ್ರಾಮಗಳಲ್ಲಿ ಅಂದಾಜು 500ಕ್ಕೂ ಹೆಚ್ಚು ಜನಸಂಖ್ಯೆ ಇದೆ. ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಸಕಲೇಶಪುರ ಕ್ಷೇತ್ರದ ಶಾಸಕ ಎಚ್‌ ಕೆ ಕುಮಾರಸ್ವಾಮಿ ಅವರಿಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದರು ಯಾವುದೆ ಪ್ರಯೋಜನವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ರೈತ, ದಲಿತ, ಆದಿವಾಸಿಗಳ ಬೃಹತ್‌ ಸಮಾವೇಶ

ಗ್ರಾಮದಲ್ಲಿ ತಮಿಳುನಾಡಿನ ವ್ಯಕ್ತಿಯೋಬ್ಬ ಸುಮಾರು 1,000 ಎಕರೆ ಕಾಫಿ ತೋಟ ಹೊಂದಿದ್ದು, ಯಾವುದೇ ಅಭಿವೃದ್ಧಿಗೆ ಕೈಜೋಡಿಸುತ್ತಿಲ್ಲ. ಈ ಎರಡು ಗ್ರಾಮಗಳ ಯುವಕರಿಗೆ ರಸ್ತೆ ಅವ್ಯವಸ್ಥೆ ಹಿನ್ನೆಲೆ ಹೆಣ್ಣು ಮಕ್ಕಳನ್ನು ಕೊಡಲು ಪೋಷಕರು ಮುಂದಾಗದ ಕಾರಣ ಹಲವರು ಇನ್ನು ಅವಿವಾಹಿತರಾಗಿದ್ದಾರೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

ಉಡುಪಿ | ಹಾರ್ದಳ್ಳಿ ಮಂಡಳ್ಳಿಯಲ್ಲಿ ಪ್ರಜಾಸೇವೆ ಆಂದೋಲನ: 103ಕ್ಕೂ ಅಧಿಕ ಅರ್ಜಿ ಸ್ವೀಕಾರ

ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾಲೂಕು ಆಡಳಿತ ಕುಂದಾಪುರ ಹಾಗೂ...