ಮೈಸೂರು | ರಂಗಭೂಮಿ ಸಮಾಜದೊಂದಿಗೆ ಸಂವಾದ ನಡೆಸುವ ಜೀವಂತ ಕ್ಷೇತ್ರ: ಪ್ರೊ. ಓ ಎಲ್ ನಾಗಭೂಷಣಸ್ವಾಮಿ

Date:

ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗ ಮಂದಿರದಲ್ಲಿ ‘ಪಾರ್ಟಿ’ ನಾಟಕಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಚಾಲನೆಯನ್ನು ನೀಡಿ, ‘ರಂಗಭೂಮಿ ಸಮಾಜದೊಂದಿಗೆ ಸಂವಾದ ನಡೆಸುವ ಜೀವಂತ ಕ್ಷೇತ್ರ’ ಎಂದು ಬಣ್ಣಿಸಿದರು.

- Advertisement -

ಕರ್ನಾಟಕದ ಪ್ರಮುಖ ರಂಗತಂಡಗಳಲ್ಲಿ ಒಂದಾದ ನಿರಂತರ ಫೌಂಡೇಶನ್ (ರಿ) ಮೈಸೂರು, ಕಳೆದ ಮೂರು ದಶಕಗಳಿಂದ ಕನ್ನಡ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಚಿಂತನಾ ಪ್ರಧಾನ ಸಾಂಸ್ಕೃತಿಕ ವೇದಿಕೆ. ಸಮಾನತೆ, ಜನಪರ ಚಿಂತನೆ ಮತ್ತು ಸಾಂಸ್ಕೃತಿಕ ಹೊಣೆಗಾರಿಕೆಯನ್ನು ಆಧಾರವಾಗಿಟ್ಟುಕೊಂಡು ಸಂವಾದ ನಡೆಸುವ, ರೂಪಿಸುವ ದಿಕ್ಕಿನಲ್ಲಿ ನಿರಂತರ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಾಟಕದ ನಿರ್ದೇಶಕರಾದ ಚಿದಂಬರರಾವ್ ಜಂಬೆ, ತಮ್ಮ 5 ದಶಕಗಳ ಒಡನಾಟದ ಬಗ್ಗೆ ಹೇಳುತ್ತಾ ಕನ್ನಡ ರಂಗಭೂಮಿಗೆ ಅಪಾರ ಕೊಡುಗೆಯಿದೆ. ವಾಸ್ತವವಾದಿ (Realistic) ನಾಟಕ ಶೈಲಿಯಲ್ಲಿ ವಿಶೇಷ ಪ್ರಾವಿಣ್ಯ ಹೊಂದಿರುವ ಅವರು, ಪಠ್ಯ ಮತ್ತು ಪ್ರದರ್ಶನದ ನಡುವಿನ ಸೂಕ್ಷ್ಮತೆಯನ್ನು ನಿಖರವಾಗಿ ಹಿಡಿದಿಡುತ್ತಾರೆ. ಪಾತ್ರಗಳ ಮನೋವೈಜ್ಞಾನಿಕ ಆಳ ಮತ್ತು ದೃಶ್ಯ ವಿನ್ಯಾಸದಲ್ಲಿ ಅಳವಡಿಸುವ ವಿಶೇಷ ನೈಪುಣ್ಯ ಅವರ ನಿರ್ದೇಶನದ ಬಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಯುವಜನತೆ ರಾಜಕೀಯ ಆಸಕ್ತಿ ಬೆಳೆಸಿಕೊಳ್ಳಬೇಕು; ಪ್ರಾತಿನಿಧ್ಯ ಒತ್ತಾಯವಾಗಬೇಕು: ಎಚ್ ಎಸ್ ಅನುಪಮ

ಕಾರ್ಯಕ್ರಮದಲ್ಲಿ ನಾಟಾಕಕಾರ ನಿರಂತರ ಪ್ರಸಾದ್ ಕುಂದೂರ್, ಎಂ.ಎಂ. ನಿರಂತರ ಸುಗುಣ , ಪ್ರೊ. ಕಾಳಚೆನ್ನೇಗೌಡ, ವನ್ಯಜೀವಿ ಛಾಯಾಗ್ರಾಹಕ ಲೋಕೇಶ್ ಮೊಸಳೆ, ಚಿನ್ನಸ್ವಾಮಿ ಒಡ್ಡಗೆರೆ, ಹಿರಿಯ ರಂಗಕರ್ಮಿ ರಾಮೇಶ್ವರಿ ವರ್ಮ, ರತ್ನ ಮಿರ್ಲೆ, ನಿರಂತರ ಶ್ರೀನಿವಾಸ್, ಡಾ. ರೇಖಾ, ಸಹ ಪ್ರಾಧ್ಯಾಪಕ ರಘು ರೆಡ್ಡಿ, ಉಪನ್ಯಾಸಕ ಸ. ವೆ. ರ. ಸ್ವಾಮಿ, ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಸೇರಿದಂತೆ ಪ್ರೇಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...