ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆ ಬೀಗ ಮುರಿದಿರುವ ಕಳ್ಳರು, ಮನೆಯಲ್ಲಿದ್ದ ಚಿನ್ನಾಭರಣ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಸಂದ್ರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಚಿನ್ನಸಂದ್ರ ಗ್ರಾಮದ ಸಿಲ್ಕ್ ಮರ್ಚೆಂಟ್ ವ್ಯಾಪಾರಿ ಎಂ ಶಫಿ ಬಿನ್ ಶೇಖ್ ಹೈದರ್ ಸಾಬ್ ಎಂಬುವವರು 20 ದಿನಗಳ ಹಿಂದೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಹಾಗಾಗ ಚಿನ್ನಸಂದ್ರ ಗ್ರಾಮದ ಮನೆಗೆ ಬಂದೋಗುತ್ತಿದ್ದರು.
ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ್ದ ಕಳ್ಳರು ಮನೆಯ ಬೀಗ ಮುರಿದು ಸುಮಾರು 800 ಗ್ರಾಂ ಚಿನ್ನಾಭರಣ ಹಾಗೂ 7 ಲಕ್ಷ ರೂ. ನಗದು ಹಣ ದೋಚಿ ಪರಾರಿಯಾಗಿದ್ದಾರೆ.
ಡಿವೈಎಸ್ಪಿ ಮುರುಳಿಧರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜಕುಮಾರ್ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.