ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

Date:

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಮನೆಯ ಬೀರುವಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಆರೋಪಿಯಿಂದ ಸುಮಾರು ₹20 ಲಕ್ಷ ಮೌಲ್ಯದ 167 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಭದ್ರಾವತಿಯ ಎನ್‌ಎಂಸಿ ಬೋವಿ ಕಾಲೋನಿಯ ನಿವಾಸಿ ರಶ್ಮಿ ಎಸ್. (47) ಅವರ ಮನೆಯಲ್ಲಿ ಚಿನ್ನಾಭರಣ ಕಳವು ನಡೆದಿತ್ತು. ನವೆಂಬರ್ 14ರಂದು ಮೊಮ್ಮಗನಿಗೆ ಚಿನ್ನದ ಆಭರಣ ಹಾಕಲು ಬೀರು ತೆರೆದಾಗ ಕುಟುಂಬಕ್ಕೆ ಆಘಾತ ಕಾದಿತ್ತು. ಬೀರುವಿನಲ್ಲಿದ್ದ ಚಿನ್ನಾಭರಣ ಹಾಗೂ 128 ಗ್ರಾಂ ಬೆಳ್ಳಿ ಆಭರಣಗಳು ನಾಪತ್ತೆಯಾಗಿದ್ದವು. ಈ ಸಂಬಂಧ ನವೆಂಬರ್ 24ರಂದು ಪೊಲೀಸರಿಗೆ ದೂರು ನೀಡಲಾಗಿತ್ತು.

ತನಿಖೆ ಚುರುಕುಗೊಳಿಸಿದ ಪೊಲೀಸರು

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು. ತನಿಖೆಯ ವೇಳೆ ಭದ್ರಾವತಿಯ ಭೂತನಗುಡಿ ನಿವಾಸಿ ನಂಜುಂಡ ಟಿ. ಅಲಿಯಾಸ್ ಬಕ್ರಿ (23) ಎಂಬಾತನ ಪಾತ್ರ ಬೆಳಕಿಗೆ ಬಂದಿದ್ದು, ನವೆಂಬರ್ 27ರಂದು ಆತನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಮತ್ತೊಬ್ಬ ಅಪ್ರಾಪ್ತ ಬಾಲಕನೂ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಆತನನ್ನು ಪೊಲೀಸರು ಅಭಿರಕ್ಷೆಗೆ ಪಡೆದಿದ್ದಾರೆ. ಆರೋಪಿಯು ಕಳ್ಳತನದ ಕೃತ್ಯದಲ್ಲಿ ಅಪ್ರಾಪ್ತನನ್ನು ಬಳಸಿಕೊಂಡಿದ್ದಾನೆ ಎಂಬ ಅಂಶ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಬಂಧಿತ ಆರೋಪಿಯಿಂದ ಸುಮಾರು 167 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಅಂದಾಜು ಮೌಲ್ಯ ₹20 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ, ಭದ್ರಾವತಿ ಉಪವಿಭಾಗದ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ನಡೆದಿದೆ. ನಗರ ವೃತ್ತ ನಿರೀಕ್ಷಕಿ ನಾಗಮ್ಮ ಕೆ. ಅವರ ನೇತೃತ್ವದಲ್ಲಿ ಪಿಎಸ್‌ಐ ಸಿದ್ದಪ್ಪ ಎಂ.ಪಿ. ಹಾಗೂ ಪೊಲೀಸ್ ಸಿಬ್ಬಂದಿಗಳಾದ ಆದರ್ಶ್ ಶೆಟ್ಟಿ , ಹನಮಂತ ಅವಟಿ , ಕಾಂತರಾಜ್ , ಬಸವರಾಜ್ ನಾಯ್ಕ್ , ರಾಘವೇಂದ್ರ , ವಿಶ್ವನಾಥ್ , ವಿಶಾಲಾಕ್ಷಿ , ಮಂಜುಳಾ ಹಾಗೂ ಮಾರುತಿ ಪಾಟೀಲ್ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು

ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಲಿಮಿಟೇಶನ್‌ಗೆ DMK ಬೆಂಬಲ: ಸ್ಟಾಲಿನ್ ಅವರನ್ನು ‘ಸಾವರ್ಕರ್ 2.0’ ಎಂದ ಟಿವಿಕೆ

ಕೇಂದ್ರ ಸರ್ಕಾರದ ಕ್ಷೇತ್ರ ಪುನರ್‌ವಿಂಗಡಣೆ (Delimitation) ಮಸೂದೆಗೆ ಆಡಳಿತಾರೂಢ ಡಿಎಂಕೆ ಅಧಿಕೃತ...

ರಾಜ್ಯದ 12 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಡಿ.9ರವರೆಗೂ ಅಬ್ಬರಿಸುವ ಸಾಧ್ಯತೆ: ಹವಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ರಾಜ್ಯದ...

ಡಿಲಿಮಿಟೇಶನ್ | ಸ್ಟಾಲಿನ್, ಪವಾರ್ ಮನವೊಲಿಸಲು ಚೆನ್ನೈಗೆ ದೌಡಾಯಿಸಿದ ಖರ್ಗೆ, ರಾಹುಲ್, ಸೋನಿಯಾ, ಮಮತಾ, ಅಖಿಲೇಶ್

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗಳ ವಿರುದ್ಧ...

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...