ಬೆಂಗಳೂರು | ಕಳ್ಳರಿಗೆ ಅಸ್ತ್ರವಾದ ಮಳೆ: ಶ್ರೀಗಂಧದ ಮರ ರಾತ್ರೋರಾತ್ರಿ ನಾಪತ್ತೆ!

Date:

Advertisements

ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇದೇ ಅವಕಾಶವನ್ನು ಬಳಸಿಕೊಂಡ‌ ಮರಗಳ್ಳರು, ನಗರದ ಪ್ರತಿಷ್ಠಿತ ಬಡಾವಣೆಯಲ್ಲಿದ್ದ ಶ್ರೀಗಂಧದ ಮರವನ್ನೇ ಕಳವುಗೈದಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ನ್ಯಾಯಾಂಗ ಬಡಾವಣೆಯ ಪಾರ್ಕ್‌ನಲ್ಲಿರುವ ಶ್ರೀಗಂಧದ ಮರವನ್ನು ಬೆಳಗಿನ ಜಾವ ಸುಮಾರು ಮೂರು ಗಂಟೆ ಸಮಯದಲ್ಲಿ ಖದೀಮರು ಕತ್ತರಿಸಿಕೊಂಡು ಹೋಗಿದ್ದಾರೆ.

ಸುರಿಯುತ್ತಿರುವ ಮಳೆಯಿಂದಾಗಿ ಅಕ್ಕಪಕ್ಕದ ಮನೆಗಳಿಗೆ ಶಬ್ದ ಕೇಳಿಸುವುದಿಲ್ಲ ಎಂಬ ದೃಢಪಡಿಸಿಕೊಂಡ ಕಳ್ಳರು, ಶ್ರೀಗಂಧದ ಮರವನ್ನು ಕತ್ತರಿಸಿಕೊಂಡು ಹೋಗಿದ್ದಾರೆ.

Advertisements

ಈ ಬಗ್ಗೆ ಯಲಹಂಕ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಯನ್ನು ನಡೆಸಿದ್ದು, ಶ್ರೀಗಂಧದ ಮರವನ್ನು ಕಳವು ಮಾಡಿಕೊಂಡು ಹೋದ ಆರೋಪಿಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

1002050926

ನ್ಯಾಯಾಂಗ ಬಡಾವಣೆಯಲ್ಲಿ ಕಳ್ಳತನಗಳು ಸಾಮಾನ್ಯ ಸಂಗತಿ ಎಂದು ಸ್ಥಳೀಯ ನಿವಾಸಿಗಳು ಸುಮ್ಮನಾಗಿಬಿಡುತ್ತಾರೆ. ಯಾರು ಸಂಬಂಧಪಟ್ಟವರಿಗೆ ದೂರನ್ನು ನೀಡಲು ಮುಂದಾಗುವುದಿಲ್ಲ. ಆದರೆ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಅವರು ತಕ್ಷಣ ಪೊಲೀಸ್ ಠಾಣೆಗೆ ಕಳ್ಳತನದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಎಎಸ್ಐ ನಾರಾಯಣಸ್ವಾಮಿ ಪರಿಶೀಲನೆ ನಡೆಸಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್ಐಆರ್ ಮಾಡಲು ಸಹಕರಿಸಿದ್ದಾರೆ.

ನ್ಯಾಯಾಂಗ ಬಡಾವಣೆಯಲ್ಲಿ ಮನೆಗಳ್ಳತನ, ಅಂಗಡಿಗಳ ಕಳ್ಳತನ, ಶ್ರೀಗಂಧ ಮರಗಳ ಕಳ್ಳತನ ನಿರಂತರವಾಗಿ ನಡೆಯುತ್ತಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್ ಪೋಲಿಸರು ರಾತ್ರಿ ಪಾಳಿಯ ಗಸ್ತನ್ನು ಇನ್ನಷ್ಟು ಹೆಚ್ಚಿಸಬೇಕೆಂದು ಒತ್ತಾಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X