ಉಡುಪಿ | ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ – ತಂದೆ, ಮಗ ಸಾವು, ತಾಯಿ ಸ್ಥಿತಿ ಗಂಭೀರ

Date:

ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ರಕ್ಷಸಿದ ಘಟನೆ ಮೇ 15ರಂದು ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಸಂಭವಿಸಿದೆ.

- Advertisement -

ಮೃತರನ್ನು ಮಾಧವ ದೇವಾಡಿಗ (55), ಪ್ರಸಾದ್‌ ದೇವಾಡಿಗ (22) ಎಂದು ಗುರುತಿಸಲಾಗಿದೆ. ತಾಯಿ ತಾರಾ ದೇವಾಡಿಗ ಅವರನ್ನು ರಕ್ಷಸಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಮೂಲತಃ ಕುಂದಾಪುರದವರಾದ ಇವರು ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಶಂಕರ್ ಶೆಟ್ಟಿ ಅವರ ಕಟ್ಟಡದಲ್ಲಿ ಸುಮಾರು ಏಳು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಂದೆ ಮತ್ತು ಮಗ ಕುಂದಾಪುರ ರಿಲಯನ್ಸ್‌ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಕುಂಭಾಸಿ ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಡುಗೆ ಕೆಲಸದ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಗುರುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಪಕ್ಕದ ಮನೆಯ ಮಹಿಳೆ ರಂಗೋಲಿ ಹಾಕಲೆಂದು ಮನೆಯಿಂದ ಹೊರಗಡೆ ಬಂದಾಗ ಮನೆಯ ಎದುರುಗಡೆ ಇದ್ದ ಬಾವಿಯಲ್ಲಿ ಕಿರುಚುವ ಶಬ್ದ ಕೇಳಿ ಬಾವಿಯಲ್ಲಿ ಇಣುಕಿ ನೋಡುವಾಗ ಮಹಿಳೆ ಬಾವಿಯಲ್ಲಿ ಒದ್ದಾಡುತ್ತಿರುವುದನ್ನು ಕಂಡು ಅಕ್ಕ ಪಕ್ಕದವರನ್ನು ಕರೆದು ತಕ್ಷಣ ಮಹಿಳೆಯನ್ನು ರಕ್ಷಸಲಾಯಿತು. ಅಷ್ಟರಲ್ಲಿ ಪತಿ, ಮತ್ತು ಮಗ ಮೃತಪಟ್ಟಿದ್ದರು. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತ ದೇಹಗಳನ್ನು ಬಾವಿಯಿಂದ ಹೊರಗೆ ತೆಗೆದರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೋಟ ಠಾಣೆ ಪಿಎಸ್‌ಐ ರಾಘವೇಂದ್ರ ಸಿ. ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

1004640970 1
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕುಂಬಾರಗಡಿಗೆ...

ಬೈಲಹೊಂಗಲ |ಕೆಆರ್‌ಡಿಸಿಎಲ್ ಅಧ್ಯಕ್ಷರಾಗಿ ಶಾಸಕ ಮಹಾಂತೇಶ ಕೌಜಲಗಿ ನೇಮಕ

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧ್ಯಕ್ಷರಾಗಿ ಬೈಲಹೊಂಗಲ ಶಾಸಕ...

ತೇರದಾಳ |ನ. 25ರಿಂದ ಶಾಲೆಗಳಲ್ಲಿ ಬಿಸಿಯೂಟ ಬಂದ್: ಅಡುಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಶಾಲೆಗಳಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕಿಚನ್ ಸೆಂಟರ್‌ಗಳನ್ನು ಪ್ರಾರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆಯ...

ಕಬ್ಬಿನ ದರ ಏರಿಕೆಗೆ ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ; ಸಕ್ಕರೆ ಗೋದಾಮುಗಳಿಗೆ ಬೀಗ

ಕಬ್ಬಿನ ದರ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು...