ಸ್ವಾತಂತ್ರ್ಯ ಪೂರ್ವದಿಂದಲೂ ವೀರಶೈವ–ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯಿದೆ : ಸಚಿವ ಈಶ್ವರ ಖಂಡ್ರೆ

Date:

ಅಖಿಲ ಭಾರತ ವೀರಶೈವ ಮಹಾಸಭೆ ಸ್ವಾತಂತ್ರ್ಯ ಪೂರ್ವದಿಂದಲೂ ವೀರಶೈವ–ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಎಲ್ಲಾ ಪೂಜ್ಯರು ಮತ್ತು ರಾಜಕೀಯ ನಾಯಕರ ಸಮ್ಮುಖದಲ್ಲಿಯೇ ಮುಂದಿಟ್ಟಿದೆ ಎಂದು ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಬಸವಕಲ್ಯಾಣದಲ್ಲಿ ಬಸವ ಮಹಾಮನೆಯಲ್ಲಿ ನಡೆದ 24ನೇ ಕಲ್ಯಾಣ ಪರ್ವದಲ್ಲಿ ಮಾತನಾಡಿದ ಅವರು, ʼ2000ನೇ ವರ್ಷದಲ್ಲಿ ಕೇಂದ್ರಕ್ಕೆ ಕಳಿಸಲಾಗಿತ್ತು. ಅಂದಿನ ಯುಪಿಎ ಸರ್ಕಾರ ಅದನ್ನು ತಿರಸ್ಕರಿಸಿತು. ಮತ್ತೆ 2013ರಲ್ಲಿ ಕಳುಹಿಸಿದ ಪ್ರಸ್ತಾವನೆಗೆ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ, ಸಚಿವರಾದ ವಿ.ಸೋಮಣ್ಣ, ಎಂ.ಬಿ.ಪಾಟೀಲ್ ಹಾಗೂ ಬಸವ ಸಮಿತಿಯ ಅರವಿಂದ ಜತ್ತಿ ಸಹಿ ಹಾಕಿ ಕೇಂದ್ರಕ್ಕೆ ಕಳುಹಿಸಲಾಗಿತ್ತು, ಅದನ್ನೂ ಸಹ ಕೇಂದ್ರ ವಾಪಸ್‌ ಕಳುಹಿಸಿತ್ತು. ತದನಂತರ 2017-18ರಲ್ಲಿ ಸಿದ್ದರಾಮಯ್ಯ ನೇತ್ರತ್ವದ ಸರ್ಕಾರ ಸಂಪುಟ ಸಭೆಯ ಶಿಪಾರಸ್ಸಿನೊಂದಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದು ವಾಪಸ್‌ ಬಂದಿತ್ತುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼಪ್ರತ್ಯೇಕ ಧರ್ಮ ಮಾನ್ಯತೆಗೆ ಎಲ್ಲಾ ಹಿರಿಯರು, ಮಠಾಧೀಶರು, ಪೂಜ್ಯರು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚಿಸಿ ಒಮ್ಮತದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಸಮಾಜವನ್ನು ಒಗ್ಗೂಡಿಸಿ ಬಲವಾದ ಸಮಾಜ ಕಟ್ಟುವ ಕಾರ್ಯ ಯಶಸ್ವಿಯಾಗುತ್ತದೆ. ಒಬ್ಬರ ಮೇಲೆ ಒಬ್ಬರು ಆರೋಪ-ಪ್ರತ್ಯಾರೋಪ ಮಾಡಿದರೆ ಸಮಾಜ ಒಗ್ಗೂಡಿಸಲು ಅಸಾಧ್ಯʼ ಎಂದರು.

ʼಸಮಾಜವನ್ನು ನಮ್ಮ ಸ್ವಾರ್ಥಕ್ಕಾಗಿ ಸಮಾಜಕ್ಕಾಗಿ ಬಹಳ ಸಲ ಯಾವುದೇ ರೀತಿಯಲ್ಲಿ ಉಪಯೋಗ ಮಾಡಿಕೊಂಡಿಲ್ಲ. ಅಸತ್ಯವಾದ ಮಾತು ನಮ್ಮ ಬಾಯಲ್ಲಿ ಯಾವತ್ತೂ ಬರುವದಿಲ್ಲ. ನಾನಾಗಲಿ, ನಮ್ಮ ತಂದೆಯಾಗಲಿ, ಸಮಾಜವನ್ನು ನಮ್ಮ ಸ್ವಾರ್ಥಕ್ಕೆ ಎಂದಿಗೂ ಬಳಸಿಕೊಂಡಿಲ್ಲ. ಆದರೆ, ಸಮಾಜಕ್ಕಾಗಿ ನಾವು, ಪ್ರಹಾರಗಳನ್ನು ಎದುರಿಸಿದ್ದೇವೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

ʼಬಸವಣ್ಣನವರನ್ನು ಎಲ್ಲಾ ಜಾತಿ-ಧರ್ಮ ಹಾಗೂ ಭಾಷಿಕರನ್ನು ನಮ್ಮವರೇ ಎಂದು ಹೇಳಿದ್ದಾರೆ. ಎಲ್ಲ ಮಠಾಧೀಶರು, ಪೂಜ್ಯರಿಗೂ ಪೂಜ್ಯನೀಯವಾಗಿ ಗೌರವಿಸುತ್ತೇವೆ. ಇದೇ ಬಸವತತ್ವವಾಗಿದೆ. ಎಲ್ಲರ ತೀರ್ಮಾನಕ್ಕೆ ನನ್ನ ಯಾವುದೇ ಅಪಸ್ವರ ಇಲ್ಲʼ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...