ರಾಜ್ಯ ಸರ್ಕಾರದಿಂದ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ: ಎಂ ಬಿ ಪಾಟೀಲ್

Date:

  • ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ
  • ‘ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆ ಸರ್ಕಾರ ಮಾಡಲಿದೆ

ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ. ಈ ಬಗ್ಗೆ ಪರಿಶೀಲಿಸಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರವನ್ನು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಅದೇ ರೀತಿ ಸ್ವಂತ ವಿಮಾನಯಾನ ಕಂಪನಿ ಕೂಡ ಸ್ಥಾಪಿಸಿ, ರಾಜ್ಯದೊಳಗೆ ಸೇವೆ ಆರಂಭಿಸಲಾಗುವುದು” ಎಂದು ತಿಳಿಸಿದರು.

ಒಂದು ಹೊಸ ವಿಮಾನ ಖರೀದಿಗೆ 200 ಕೋಟಿ ವೆಚ್ಚವಾಗಲಿದೆ. 600 ಕೋಟಿ ವೆಚ್ಚದಲ್ಲಿ ಮೂರು ವಿಮಾನ ಖರೀದಿಸಿ ಬೆಂಗಳೂರಿನಿಂದ ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿವೆ ವಿಮಾನಯಾನ ಸೇವೆ ಒದಗಿಸುವ ಬಗ್ಗೆ ಚಿಂತನೆ ಇದೆ. ಈ ಬಗ್ಗೆ ವಿಮಾನಯಾನ ಕ್ಷೇತ್ರದ ತಜ್ಞರ ಜತೆ ಸಮಾಲೋಚಿಸಲಾಗುತ್ತಿದೆ” ಎಂದು ವಿವರಿಸಿದರು.‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರವೇ ಮಾಡಲಿದೆ. ಇನ್ನು ಮುಂದೆ ಹೊಸದಾಗಿ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ಪ್ರಾಧಿಕಾರದ ಮೂಲಕವೇ ನಿರ್ವಹಣೆ ಮಾಡಲಾಗುವುದು” ಎಂದರು.

“ಕಾಂಗ್ರೆಸ್‌ ಸರ್ಕಾರ ನೂರು ದಿನ ಪೂರೈಸಿದೆ. ಈ ಅವಧಿಯಲ್ಲಿ ಕೈಗಾರಿಕಾ ಇಲಾಖೆಯಲ್ಲಿ 60,000 ಕೋಟಿ ರೂ. ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಹಲವು ಹೊಸ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ” ಎಂದು ವಿವರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...