ಜುಲೈನಲ್ಲಿ ಉತ್ತಮ ಮಳೆ, ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಇಲ್ಲ: ಸಚಿವ ಕೃಷ್ಣಭೈರೇಗೌಡ

Date:

  • ‘ಮಳೆ ಕೊರತೆ ಶೇ. 56 ರಿಂದ ಶೇ. 29ಕ್ಕೆ ಇಳಿಕೆಯಾಗಿದೆʼ
  • ಹಿಂದಿನ ಸರ್ಕಾರದಲ್ಲಿ ಜಲಾಶಯಗಳ ಆಶಿಸ್ತಿನ ನಿರ್ವಹಣೆ

ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿಲ್ಲ, ರೈತರ ಬೆಲೆ ಹಾನಿಯಾಗಿದೆ, ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ ಎಂದು ಸದನದಲ್ಲಿ ಅನೇಕ ಶಾಸಕರು ಪ್ರಶ್ನೆ ಮುಂದಿಟ್ಟರು. ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, “ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮಳೆಯ ಕೊರತೆ ಇದೀಗ ಶೇ. 29ಕ್ಕೆ ಇಳಿದಿದೆ. ಹೀಗಾಗಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿದ್ದರೂ ಸಹ, ಕೆಲವು ಜಿಲ್ಲೆಗಳು ಈಗಲೂ ಮಳೆ ಕೊರತೆಯನ್ನು ಎದುರಿಸುತ್ತಿವೆ. ರಾಜ್ಯದ 330 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ. 404 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆದು ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ಹೊರೆಯನ್ನು ಸರ್ಕಾರ ಗ್ರಾಮ ಪಂಚಾಯಿತಿಗಳ ಮೇಲೆ ಹೊರಿಸಿಲ್ಲ. ಬದಲಾಗಿ ಪ್ರತಿ ಜಿಲ್ಲೆಗೆ ನೀರಿನ ಪೂರೈಕೆಗೆಂದೆ ಸರ್ಕಾರ ತಲಾ 1 ಕೋಟಿ ರೂ.ಹಣ ಮಂಜೂರು ಮಾಡಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಎಚ್ಚರವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೆ, ಹೆಚ್ಚುವರಿ ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲು ಸರ್ಕಾರ ಬದ್ಧವಾಗಿರುವುದಾಗಿ ಸಚಿವರಿಗೆ ತಿಳಿಸಲಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ- ಮಣಿಪುರದ ಪೈಶಾಚಿಕ ಕೃತ್ಯ- ಸುಪ್ರೀಮ್ ಉಸ್ತುವಾರಿಯಲಿ ನಡೆಯಲಿ ನ್ಯಾಯಾಂಗ ತನಿಖೆ

“ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ ಎಲ್ಲ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ಪರಿಣಾಮ ಜಲಾಶಯಗಳು ಬಹುತೇಕ ಬರಿದಾಗಿವೆ. ಕಳೆದ ವರ್ಷಾಂತ್ಯದ ಡಿಸೆಂಬರ್ ವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಜಲಾಶಯಗಳಿಗೆ ನೀರಿನ ಹರಿವು ಭರಪೂರವಾಗಿತ್ತು. ಆದರೆ, ಹಿಂದಿನ ಸರ್ಕಾರ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ನೀರನ್ನು ಬೇಕಾಬಿಟ್ಟಿ ನಾಲೆಗಳಿಗೆ ಹರಿಸಿದೆ. ಪರಿಣಾಮ ಬಹುತೇಕ ಜಲಾಶಯಗಳು ಖಾಲಿಯಾಗಿವೆ” ಎಂದು ಅಸಮಾಧಾನ ಹೊರಹಾಕಿದರು.

“ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗದ ಕಾರಣ ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ಕುಸಿದಿತ್ತು. ಆದರೆ, ಜುಲೈನಲ್ಲಿ ಉತ್ತಮ ಮಳೆಯಾಗಿದೆ. ಕಾವೇರಿಯ ನಾಲ್ಕು ಜಲಾಶಯಗಳಿಗೆ 18,617 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಕೃಷ್ಣ ನದಿಯ 6 ಜಲಾಶಯಗಳಿಗೆ 76,264 ಕ್ಯೂಸೆಕ್ಸ್ ನೀರಿನ ಹರಿವಿದೆ. ಆಲಮಟ್ಟಿಗೂ 32,146 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಘಟಪ್ರಭ-ಮಲಪ್ರಭದಲ್ಲೂ ನೀರಿನ ಒಳಹರಿವು ಹಣನೀಯವಾಗಿ ಹೆಚ್ಚಾಗಿದೆ” ಎಂದರು.

ಸಿಎಂ ಜೊತೆ ಚರ್ಚಿಸಿ ಬರಗಾಲ ಘೋಷಣೆ

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತ ಸಂಕಷ್ಟಕ್ಕೆ ಈಡಾಗಿದ್ದಾನೆ. ಹಲವೆಡೆ ಬೆಲೆ ನಷ್ಟವಾಗಿದೆ. ಹೀಗಾಗಿ ಬರಗಾಲ ಘೋಷಿಸಿ ರೈತರಿಗೆ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದು ವಿಧಾನಸಭೆಯಲ್ಲಿ ಹಲವು ಶಾಸಕರು ಒತ್ತಾಯಿಸಿದರು. ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ, “ರಾಜ್ಯದಲ್ಲಿ ಕೆಲವು ತಾಲೂಕುಗಳಲ್ಲಿ ಬರದ ಛಾಯೆ ಇದೆ. ಅಲ್ಲದೆ, ಬರ ಘೋಷಣೆಗೆ ಕೇಂದ್ರ ಸರ್ಕಾರದ ಕೆಲವು ಮಾನದಂಡಗಳಿವೆ. ಆಗಸ್ಟ್ ಮೊದಲ ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಬರ ಘೋಷಣೆಯ ಬಗ್ಗೆ ಚಿಂತನೆ ನಡೆಸಲಾಗುವುದು” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

"ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ...

ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...