ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರವಾಗಿ ನಿನ್ನೆ ರಾತ್ರಿ ನಡೆದ ಗಲಾಟೆಯಲ್ಲಿ ಕಲ್ಲುತೂರಾಟವಾಗಲಿ ಅಥವಾ ಗಲಭೆಯಾಗಲಿ ನಡೆದಿಲ್ಲ ಎಂದು ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.
ದಾವಣಗೆರೆ ನಗರದಲ್ಲಿ ಗುರುವಾರ ಬೆಳಿಗ್ಗೆ 9ರ ವೇಳೆ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿರುವ ಅವರು, “ಫ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಮ್ಮ ಮನೆ ಮೇಲೆ ಕಲ್ಲು ತೂರಿದ್ದಾರೆಂದು ಕೆಲ ನಾಗರಿಕರು ಆರೋಪಿಸಿದ್ದರು” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ
“ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ಬಳಿ ಮನೆಯೊಂದರ ಮುಂದೆ ಫ್ಲೆಕ್ಸ್ ಅಳವಡಿಸಿದ್ದಾರೆಂದು ಆರೋಪಿಸಿ ಎರಡು ಕೋಮಿನ ಯುವಕರ ನಡುವೆ ಗಲಾಟೆ ಶುರುವಾಗಿತ್ತು. ಪೂರ್ವ ವಲಯದ ಐಜಿಪಿ ಬಿ ಆರ್ ರವಿಕಾಂತೇಗೌಡ ಅವರೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು. ಆದರೆ ಯಾವುದೇ ರೀತಿಯ ಕಲ್ಲುತೂರಾಟಗಳು ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.