ಕೋಲಾರ | ದಬ್ಬಾಳಿಕೆಯ ಪಿಡುಗನ್ನು ಹೋಗಲಾಡಿಸಬೇಕಿದೆ : ಎಂಎಲ್‌ಸಿ ನಾಗರಾಜ್ ಯಾದವ್

Date:

ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆಯಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಹೇಳಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಒಂದು ಕಡೆ ಶೋಷಣೆ, ಮತ್ತೊಂದು ಕಡೆ ಭ್ರಷ್ಟಾಚಾರ, ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ. ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ. ಇದು ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ. ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ. ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ. ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ. ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದೊಂದಿಗೆ ಚರ್ಚಿಸಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ. ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ. ಡಾ.ಶಂಕರಪ್ಪನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ. ಮುಂದೆ ಅವರು ಬರವಣಿಗೆಗೆ ಹೆಚ್ಚಿನ ಸಮಯ ಕೊಡಲಿದ್ದಾರೆ. ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದು ಬೇಡಿಕೆಯಿಟ್ಟರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು. ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕೆಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ. ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು. ಇವು ಮನುಷ್ಯನ ವಿಕಸನಕ್ಕೆ ನಾಲ್ಕು ಪ್ರಮುಖ ಅಂಶಗಳಾಗಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಕಾರಿನ ಗಾಜು ಹೊಡೆದು 2 ಲಕ್ಷ ರೂ. ದೋಚಿದ ಕಳ್ಳ ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್, ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಶಿವಚಿತ್ತಪ್ಪ, ಸಮಾಜ ಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಇಂದೋ-ನಾಳೆಯೋ ಬೀಳುವಂತಿರುವ ಮನೆ: ಈ ಕುಟುಂಬಕ್ಕೆ ಬೇಕಿದೆ ಸರ್ಕಾರದ ಸಹಾಯಹಸ್ತ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ಮೊರಬ ದೊಡ್ಡ ಗ್ರಾಮವಾಗಿದೆ. ಸಬಲರಾಗಿ ಸಂಖ್ಯೆ...

ಕೊಪ್ಪಳ | ಗಣಪತಿ ಮೂರ್ತಿ ಇರುವ ಟ್ರಾಕ್ಟರ್‌ಗೆ ಲಾರಿ ಡಿಕ್ಕಿ; ನಾಲ್ವರಿಗೆ ಗಂಭೀರ ಗಾಯ

ಗಣೇಶ ಚತುರ್ಥಿಯ ಅಂಗವಾಗಿ ಗಣಪತಿ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ...

ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ಐದು ಸಾವಿರ ನಗ್ನ ಫೋಟೋ, ವಿಡಿಯೋ ಪತ್ತೆ!

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ...