ಗ್ರೇಟರ್ ತುಮಕೂರು ಪ್ರಸ್ತಾವನೆ ಸಲ್ಲಿಸಲು ಚಿಂತನೆ : ಸಚಿವ ಡಾ. ಜಿ.ಪರಮೇಶ್ವರ

Date:

 ತುಮಕೂರು ಮತ್ತಷ್ಟು ಅಭಿವೃದ್ಧಿ ಆಗಬೇಕಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಘೋಷಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.

- Advertisement -

 ತುಮಕೂರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಶುಕ್ರವಾರ 300 ಹಾಸಿಗೆಗಳ ಜಿಲ್ಲಾಸ್ಪತ್ರೆ ನೂತನ ಕಟ್ಟಡದ ಶಂಕುಸ್ಥಾಪನೆ, 100 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ, 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನರ್ಸಿಂಗ್ ಕಾಲೇಜು, ಹಾಸ್ಟಲ್ ಕಟ್ಟಡಗಳ ಲೋಕಾರ್ಪಣೆ ಹಾಗೂ ತುಮಕೂರು ತಾಲ್ಲೂಕಿನ ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 30 ಎಂ.ಎಲ್.ಡಿ. ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆ ಉದ್ಘಾಟನೆ ಸೇರಿದಂತೆ ವಿವಿಧ 645 ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

 ತುಮಕೂರು ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ಆಗಬೇಕಿದೆ. ಆಗುತ್ತಿವೆ. ಅಂತೆಯೇ ತುಮಕೂರು ನಗರದ ಅಭಿವೃದ್ಧಿಯೂ ಪೂರಕವಾಗಿ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಯೋಜನೆ ಪ್ರಸ್ತಾವವನ್ನು ಸರ್ಕಾರದ ಮುಂದೆ ಮಂಡಿಸಲಾಗುವುದು ಎಂದು ಅವರು ತಿಳಿಸಿದರು. 

 ತುಮಕೂರು ನಗರದಲ್ಲಿ ಬಹು ಕಾಲದಿಂದ ನಾಗರಿಕರಿಗೆ ನಿವೇಶನಗಳ ಹಂಚಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳೊಳಗಾಗಿ 2 ಸಾವಿರ ನಿವೇಶನಗಳನ್ನು ಹಂಚಲಾಗುವುದು ಎಂದು ತಿಳಿಸಿದ ಅವರು, ನೆನೆಗುದಿಗೆ ಬಿದ್ದಿರುವ 2ನೇ ಹಂತದ ಒಳಚರಂಡಿ ಯೋಜನೆ ಕಾಮಗಾರಿಗಳು ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ಶೀಘ್ರವೇ ಪೂರ್ಣಗೊಳ್ಳಲಿವೆ ಎಂದರು.

 ತ್ಯಾಜ್ಯ ನಿರ್ವಹಣೆ ಬಹು ದೊಡ್ಡ ಸಮಸ್ಯೆ. ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಸಂಬಂಧಿತ ಯೋಜನೆ ಪ್ರಸ್ತಾವ ಇಂಧನ ಸಚಿವರ ಮುಂದಿದೆ. ಅಂತೆಯೇ ತುಮಕೂರಿನಲ್ಲಿಯೂ ಕೂಡ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಕ್ರಮವಹಿಸಲಾಗುವುದು ಎಂದರು. 

 ಹಿರೇಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಸಂಪರ್ಕಿಸುವ ಕೇಂದ್ರದ ರಸ್ತೆ ಯೋಜನೆಗೆ ನಮ್ಮ ಸಂಪೂರ್ಣ ಸಹಕಾರವಿದ್ದು, ತುಮಕೂರು ನಗರದ ಅಭಿವೃದ್ಧಿಯ ದೃಷ್ಟಿಯಿಂದ ಈ ಯೋಜನೆಗೆ ಪೂರಕವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು. 

1002318405

 ಅಭಿವೃದ್ಧಿ ಕುರಿತಂತೆ ಟೀಕೆಗಳು ನಗಣ್ಯ ಎಂದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಪ್ರತಿವರ್ಷ 52 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳನ್ನು ನೀಡಿದಾಗ್ಯೂ ರಾಜ್ಯದಾದ್ಯಂತ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದು ತಮ್ಮ ಕಣ್ಣ ಮುಂದಿದೆ. ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಉದ್ಘಾಟನೆ ಹೊರತುಪಡಿಸಿ ಇಂದು ಒಂದೇ ದಿನ 645 ಕೋಟಿ ರೂ.ಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ ಎಂಬುದನ್ನು ಮನಗಾಣಬೇಕು ಎಂದರು. 

 ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 17 ಬಾರಿ ಆಯ-ವ್ಯಯ ಮಂಡಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಅವರಿಗೆ ಹಣಕಾಸಿನ ನಿರ್ವಹಣೆ ಸರಿಯಾಗಿ ಗೊತ್ತಿದೆ ಎಂದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಎಂದಿಗೂ ನಿಲ್ಲುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

 ತುಮಕೂರು ವಿಶ್ವವಿದ್ಯಾಲಯ ವೇಗವಾಗಿ ಬೆಳೆಯುತ್ತಿದೆ, 14 ಸಾವಿರ ಎಕರೆ ಪ್ರದೇಶದಲ್ಲಿ ಅಭಿವೃದ್ಧಿಯಾಗಿರುವ ವಸಂತನರಸಾಪುರ ಕೈಗಾರಿಕಾ ವಲಯದಲ್ಲಿ 5 ಲಕ್ಷ ಜನರು ಉದ್ಯೋಗಿಗಳಾಗಲಿದ್ದಾರೆ. ಇದರ ಲಾಭವನ್ನು ತುಮಕೂರಿಗರು ಪಡೆದುಕೊಳ್ಳಬೇಕು ಎಂದರು. 

 ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಗ್ರಾಮೀಣ ಬಡಜನರ ಬದುಕನ್ನು ಉತ್ತಮಪಡಿಸಲು ಬದ್ಧವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂದಿಗೂ ಜನಪರ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

 ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಬಿ. ಸುರೇಶ್‌ಗೌಡ, ಸಿ.ಬಿ. ಸುರೇಶ್ ಬಾಬು, ಹೆಚ್.ವಿ. ವೆಂಕಟೇಶ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾಚೋಳನ್, ಐಜಿಪಿ ಲಾಬೂರಾಮ್, ಕೆಎಸ್‌ಆರ್‌ಟಿಸಿ ನಿಗಮದ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಚಂದ್ರಶೇಖರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಅಸ್ಗರ್ ಬೇಗ್ ಮತ್ತಿತರರು ಉಪಸ್ಥಿತರಿದ್ದರು. 

ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : 

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 42.05 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ತುರ್ತು ತೀವ್ರ ನಿಗಾ ಘಟಕ, 22.28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, 69.96 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ, 22 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನರ್ಸಿಂಗ್ ಕಾಲೇಜು, ಹಾಸ್ಟಲ್ ಕಟ್ಟಡಗಳ ಲೋಕಾರ್ಪಣೆ ಹಾಗೂ 131 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ 300 ಹಾಸಿಗೆಗಳ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ, 29.49 ಕೋಟಿ ರೂ. ವೆಚ್ಚದ 25 ಎಂ.ಎಲ್.ಡಿ. ಸಾಮರ್ಥ್ಯದ ಎಸ್.ಟಿ.ಪಿ. ಘಟಕಕ್ಕೆ ಚಾಲನೆ ಹಾಗೂ 50 ಕೋಟಿ ರೂ. ವೆಚ್ಚದ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 169 ಕೋಟಿ ರೂ. ವೆಚ್ಚದ 2ನೇ ಹಂತದ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಾಯಿತು. 

ಜಿಲ್ಲಾಡಳಿತ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿರುವ 130 ಕೋಟಿ ರೂ. ವೆಚ್ಚದ ತುಮಕೂರು ತಾಲ್ಲೂಕಿನ ಭೀಮಸಂದ್ರ ಕೆರೆಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 30 ಎಂ.ಎಲ್.ಡಿ. ತೃತೀಯ ಹಂತದ ಸಂಸ್ಕರಿಸಿದ ನೀರು ಪೂರೈಕೆ ಯೋಜನೆ ಉದ್ಘಾಟಿಸಲಾಯಿತು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ತುಮಕೂರು ದಸರಾಕ್ಕೆ ತಾರಾ ಮೆರುಗು : 11 ದಿನ, ನೂರಾರು ಆಕರ್ಷಣೆ

ದೇವಿಯ ಆರಾಧನೆ, ತಾರೆಯರ ಕಲರವ, ಸಂಗೀತದ ರಸದೌತಣ, ನೃತ್ಯ ವೈಭವ, ಕ್ರೀಡಾ...