ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ.
ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ಮಂಗಳವಾರ ತೆರಳಿದ್ದು, ಕಪಾಲಿ ಥಿಯೇಟರ್ ಬಳಿಯಲ್ಲಿರುವ ಖಾಸಗಿ ಹೋಟೆಲ್ವೊಂದರಲ್ಲಿ ಕೊಠಡಿ ಬುಕ್ ಮಾಡಿಕೊಂಡು ಉಳಿದಿದ್ದರು.
ಕೊಠಡಿಯಲ್ಲಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ತಿಳಿದು ಬಂದಿದೆ. ಜಕ್ಕಣ್ಣ ಗೌಡರವರು ಗದಗ ಜಿಲ್ಲೆಯವರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ಪಡೆದಿರುವ ಬೆಂಗಳೂರಿನ ಪೊಲೀಸರು, ಇನ್ನಷ್ಟೇ ಹೆಚ್ಚಿನ ವಿವರಗಳನ್ನು ನೀಡಬೇಕಿದೆ.
ಮಾಹಿತಿ: ಲಿಯೋ ಅರೋಜ, ತೀರ್ಥಹಳ್ಳಿ
