ತೀರ್ಥಹಳ್ಳಿ | ನಮಾಜ್ ವೇಳೆ ಕಳ್ಳತನ; ಆರೋಪಿಗಳ ಬಂಧನ

Date:

ನಮಾಜ್ ಮುಗಿಸಿಕೊಂಡು ಬರುವ ಹೊತ್ತಿಗೆ ಲಕ್ಷಾಂತರ ರೂ ಹಣದ ಸಮೇತ ಗೂಡ್ಸ್ ವಾಹನವನ್ನೇ ಮಂಗಮಾಯ ಮಾಡಿದ್ದ ಪ್ರಕರಣವನ್ನ ತೀರ್ಥಹಳ್ಳಿ ಪೊಲೀಸರು‌ ಬೇಧಿಸಿದ್ದಾರೆ.

- Advertisement -

ದಾವಣಗೆರೆ ಮೂಲದ ಸೈಯದ್‌ ಅಬ್ದುಲ್ಲಾ(45), ನವೀದ್‌ ಅಹಮದ್‌(40) ಹಾಗೂ ಜಾವೀದ್(42)‌ ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಮಾ.14ರಂದು ಬೆಳಗ್ಗೆ ಹೊನ್ನಾಳಿ ಬೊಂಬು ಬಜಾರ್‌ನ ಮಹಮದ್ ಇರ್ಷಾದ್, ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ₹29,00,000ಗಳನ್ನು ತೆಗೆದುಕೊಂಡು, ಸ್ಕ್ರಾಪ್ ವ್ಯವಹಾರದ ಸಂಬಂಧ ಹೊನ್ನಾಳಿಯಿಂದ ಮಂಗಳೂರಿಗೆ ಹೊರಟಿದ್ದರು.

ಮಾರ್ಗ ಮಧ್ಯೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಂಜದಕಟ್ಟೆ ಮಸೀದಿಯ ಹತ್ತಿರ ನಮಾಜ್ ಮಾಡುವ ಸಲುವಾಗಿ ವಾಹನವನ್ನು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ, ಹಣವಿದ್ದ ಬ್ಯಾಗ್ ಅನ್ನು ವಾಹನದಲ್ಲಿಯೇ ಇಟ್ಟು ಮಸೀದಿಗೆ ನಮಾಜ್ ಮಾಡಲು ಹೋಗಿ ವಾಪಸ್ಸು ಬಂದು ನೋಡಿದಾಗ, ವಾಹನವು ಸ್ಥಳದಲ್ಲಿ ಇರಲಿಲ್ಲ. ಹಣ ಹಾಗೂ ಗೂಡ್ಸ್ ವಾಹನವನ್ನು ಕಳುವ ಮಾಡಲಾಗಿತ್ತು.

ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಕಳುವಾದ ನಗದು ಹಣ, ವಾಹನ ಮತ್ತು ಆರೋಪಿಗಳ ಪತ್ತೆಗಾಗಿ ಎಸ್‌ಪಿ ಮಿಥುನ್ ಕುಮಾರ್ ಜಿ. ಕೆ, ಅಡಿಷನಲ್ ಎಸ್‌ಪಿಗಳಾದ ಅನಿಲ್ ಕುಮಾರ್ ಭೂಮರಡ್ಡಿ, ಕಾರಿಯಪ್ಪ ಎ. ಜಿರವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ಇದನ್ನೂ ಓದಿ: ತೀರ್ಥಹಳ್ಳಿ | 15ನೇ ಮೈಲಿಗಲ್ಲು ಬಳಿ ಅಪಘಾತ; ಯುವಕರ ಕಾಲು ಮುರಿತ

ತನಿಖಾ ತಂಡವು ಹೊನ್ನಾಳಿ ಪೊಲೀಸ್ ಠಾಣೆಯ ಪಿಐ ಸುನೀಲ್ ಕುಮಾರ ಹೆಚ್, ಎಎಸ್ಐ ಹರೀಶ್ ಮತ್ತು ಸಿಬ್ಬಂದಿಗಳಾದ ಸಿ.ಹೆಚ್.ಸಿ ಜಗದೀಶ, ಹೇಮಾನಾಯ್ಕ್, ಸುರೇಶ್ ನಾಯ್ಕ್ ಮತ್ತು ರಾಜಶೇಖರ್ ರವರ ಸಹಕಾರದೊಂದಿಗೆ ಆಪರೇಷನ್ ನಡೆಸಿತ್ತು. ಆರೋಪಿತರಿಂದ 29 ಲಕ್ಷ ನಗದು ಹಾಗೂ ಅಂದಾಜು ಮೌಲ್ಯ ₹10,00,000ಗಳ ವಾಹನ ಮತ್ತು ಕೃತ್ಯಕ್ಕೆ ಬಳಸಿದ ‌ಅಂದಾಜು ಮೌಲ್ಯ ₹6,00,000 ಟೊಯೋಟಾ ಇಟಿಯೋಸ್ ಕಾರು ಸೇರಿ ಒಟ್ಟು ₹45,00,000ಗಳ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಶಿವಮೊಗ್ಗ | ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಗಳ ಮೇಲೆ ತಹಶೀಲ್ದಾರ್ ದಾಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ...