ಬೇಕಾಬಿಟ್ಟಿ ಮಾತನಾಡುವುದೇ ಆ ಸಂಸದನ ಕೆಲಸ: ಪ್ರತಾಪ್ ಸಿಂಹ ವಿರುದ್ಧ ಎಂಬಿ ಪಾಟೀಲ ವಾಗ್ದಾಳಿ

Date:

  • ಓರ್ವ ಸಂಸದ ಲಘುವಾಗಿ ಲಂಗು-ಲಗಾಮಿಲ್ಲದೆ ಏನೇನೊ ಮಾತಾಡ್ತಾರೆ: ವಾಗ್ದಾಳಿ
  • ಲಘುವಾಗಿ ಮಾತನಾಡಿದ್ದರಿಂದ ಅವರ ಪಕ್ಷದ ಪರಿಸ್ಥಿತಿ ಏನಾಗಿದೆ ಎಂದು ರಾಜ್ಯ ಕಂಡಿದೆ

ಓರ್ವ ಸಂಸದ ಲಘುವಾಗಿ ಲಂಗು-ಲಗಾಮಿಲ್ಲದೆ ಏನೇನೊ ಮಾತನಾಡುತ್ತಿದ್ದಾರೆ. ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ ಕಳೆಯುವುದೇ ಇವರ ದಿನಚರಿಯಾಗಿದೆ ಎಂದು ಸಚಿವ ಎಂ ಬಿ ಪಾಟೀಲ ಅವರು ಪರೋಕ್ಷವಾಗಿ ಪ್ರತಾಪ್‌ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಇವರು ಹಾಗೂ 2-3 ಭಾಷಣಕಾರರ ಮಂಡಳಿಯ ಸದಸ್ಯರು ತಮ್ಮದೇ ಪಕ್ಷದ ನಾಯಕರಾದ ಯಡಿಯೂರಪ್ಪನವರು ಏನು ಮಾಡಿದ್ದಾರೆ? ಅವರ ಕೊಡುಗೆ ಏನು? ಎಂದು ಪ್ರಶ್ನಿಸುವ ದಾಟಿಯಲ್ಲಿ ಮಾತನಾಡಿ, ಅವರನ್ನು ಅಧಿಕಾರದಿಂದಲೂ ಇಳಿಸಿದರು. ಲಘುವಾಗಿ ಮಾತನಾಡಿ ಅವರ ಪಕ್ಷದ ಪರಿಸ್ಥಿತಿ ಏನಾಗಿದೆ ಎಂದು ರಾಜ್ಯ ಕಂಡಿದೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಾನು ಸುಮಾರು 20 ವರ್ಷಗಳ ಹಿಂದೆ ನನ್ನ 33ನೇ ವಯಸ್ಸಿಗೆ ಸಂಸದನಾದವನು. ನಾನು ಗಾಳಿಯಲ್ಲಿ ಗೆದ್ದು ಸಂಸದನಾದವನಲ್ಲ, ವಾಜಪೇಯಿ ಅಲೆಯಲ್ಲಿಯೂ ಸಹ ಗೆದ್ದ ಉತ್ತರಕರ್ನಾಟಕ ಭಾಗದ ಏಕೈಕ ಕಾಂಗ್ರೆಸ್ ಸಂಸದ” ಎಂದು ತಮ್ಮ ರಾಜಕೀಯ ಶಕ್ತಿ ಬಗ್ಗೆ ಎಂ ಬಿ ಪಾಟೀಲ ತಿಳಿಸಿದ್ದಾರೆ.

“ತಮ್ಮ ಸ್ಥಾನ ಶಾಶ್ವತ ಎಂದು ತಿಳಿದಂತಿದೆ ಹಾಗೂ ಕೇವಲ ಇನ್ನು 10 ತಿಂಗಳುಗಳಲ್ಲಿ ಚುನಾವಣೆ ಬರಲಿದ್ದು ಜನರ ಮುಂದೆ ಹೋಗಲಿದ್ದಾರೆ ಎಂಬುದನ್ನು ಮರೆತಿರಬಹುದು. ನೆನಪಿರಲಿ Every day is not a Sunday!” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...