ಕುಡುಪು ಘಟನೆ | ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು: ಸಂತ್ರಸ್ತ ಅಶ್ರಫ್ ಸಹೋದರ ಜಬ್ಬಾರ್

Date:

ಮಂಗಳೂರು ನಗರದ ಕುಡುಪು ಎಂಬಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ಸತ್ಯಶೋಧನಾ ವರದಿಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

- Advertisement -

ಸತ್ಯಶೋಧನಾ ಸಮಿತಿಯು ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗುಂಪು ಹತ್ಯೆಗೊಳಗಾದ ಅಶ್ರಫ್ ಅವರ ಸಹೋದರ ಅಬ್ದುಲ್ ಜಬ್ಬಾರ್ ಕೂಡ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2025ರ ಏಪ್ರಿಲ್ 27ರಂದು ನಡೆದಿದ್ದ ನನ್ನ ಸಹೋದರನನ್ನು ಗುಂಪು ಹತ್ಯೆ ನಡೆಸಿ ಕೊಲ್ಲಲಾಗಿತ್ತಾದರೂ, ನಮ್ಮ ಕುಟುಂಬಕ್ಕೆ ಮಾಹಿತಿ ಸಿಕ್ಕಿದ್ದು ಏಪ್ರಿಲ್ 29ರಂದು. ಮಂಗಳೂರಿನ ಗುಜರಿ ವ್ಯಾಪಾರಿಯಾಗಿರುವ ಸಯೀದ್ ಎನ್ನುವವರ ಅಂಗಡಿಗೆ ತಾನು ಹೆಕ್ಕುತ್ತಿದ್ದ ಎಲ್ಲ ಗುಜರಿಗಳನ್ನು ನನ್ನ ಸಹೋದರ ನೀಡುತ್ತಿದ್ದ. ಪೊಲೀಸರು ವಿವರ ಕಲೆ ಹಾಕುತ್ತಿದ್ದ ವೇಳೆ ಈ ಸಂಗತಿ ಅವರಿಗೆ ಗೊತ್ತಾಯಿತು. ಸಯೀದ್ ಅವರ ಮೂಲಕ ಕೇರಳದಲ್ಲಿರುವ ನಮ್ಮ ಕುಟುಂಬದ ಸದಸ್ಯರೋರ್ವರಿಗೆ ವಿಚಾರ ಗೊತ್ತಾಯಿತು” ಎಂದು ವಿವರಿಸಿದರು.

“ಅಶ್ರಫ್ ಕೊಲೆಯಾದ ವಿಚಾರವನ್ನು ಪೊಲೀಸರ ಮೂಲಕ ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಷಡ್ಯಂತ್ರ ನಡೆದಿತ್ತು. ಮಂಗಳೂರಿನ ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಅವರು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂಬ ಹೆಸರು ಇರುವುದರಿಂದ ನಮ್ಮ ಸಹೋದರನಿಗೆ ನ್ಯಾಯ ಸಿಗುವ ನಂಬಿಕೆ ಇದೆ” ಎಂದು ಜಬ್ಬಾರ್ ತಿಳಿಸಿದರು.

ಜಬ್ಬಾರ್ ಪಿಕ್

” ಗುಂಪು ಹತ್ಯೆಯ ಬಗ್ಗೆ ಕರ್ನಾಟಕದ ಕೆಲವು ಮಾನವ ಹಕ್ಕು ಸಂಘಟನೆಗಳು ಸತ್ಯಶೋಧನಾ ವರದಿಯನ್ನು ನಡೆಸಿದೆ. ಅದರಲ್ಲಿ ಕೂಡ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ನಮಗೆ ಹಲವು ಮಾಹಿತಿ ಸಿಕ್ಕಿದೆ. ಅಶ್ರಫ್ ಗುಂಪು ಹತ್ಯೆ ಬಗ್ಗೆ ಕೇರಳ ಸರ್ಕಾರ ಕೂಡ ಕರ್ನಾಟಕ ಸರ್ಕಾರಕ್ಕೆ ಹೆಚ್ಚು ಒತ್ತಡ ಹಾಕಿಲ್ಲ ಎಂಬುದು ಕೂಡ ನಮಗಿರುವ ಮಾಹಿತಿ. ಉತ್ತರ ಪ್ರದೇಶದಲ್ಲಿ ಗುಂಪು ಹತ್ಯೆಯಾದ ಅಖ್ಲಾಕ್ ವಿಚಾರಗಳನ್ನೆಲ್ಲ ಪ್ರಸ್ತಾಪಿಸಿ ಕೇರಳದಲ್ಲಿ ಪಿಣರಾಯಿ ಸರ್ಕಾರ ಅಧಿಕಾರಕ್ಕೆ ಬಂದಿತ್ತಾದರೂ, ಮಲಯಾಳಿಯಾಗಿರುವ ಅಶ್ರಫ್ ಗುಂಪು ಹತ್ಯೆಯ ವಿಚಾರದಲ್ಲಿ ಹೆಚ್ಚು ಆಸಕ್ತಿ ತೋರಿಲ್ಲ ಎಂಬುದು ವಾಸ್ತವ” ಎಂದು ಬೇಸರಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಸತ್ಯಶೋಧನಾ ವರದಿ ಬಿಡುಗಡೆ; 2 ತಿಂಗಳಾದರೂ ಸರ್ಕಾರಿ ವಕೀಲರನ್ನೇ ನೇಮಿಸದ ರಾಜ್ಯ ಸರ್ಕಾರ!

“ಇದೇ ಕಟ್ಟಕಡೆಯ ಗುಂಪು ಹತ್ಯೆಯಾಗಬೇಕು. ಇನ್ನು ಯಾವತ್ತೂ ಯಾರನ್ನೂ ಥಳಿಸಿ ಕೊಲ್ಲಬಾರದು. ಅಶ್ರಫ್ ಅವರನ್ನು ಥಳಿಸಿ ಕೊಂದವರೆಲ್ಲರೂ ತಮ್ಮ ಅಪರಾಧಕ್ಕೆ ಶಿಕ್ಷೆ ಅನುಭವಿಸಬೇಕು. ಜಾತಿ-ಧರ್ಮ ನೋಡಿ ಕೊಲ್ಲುವುದು ದೇಶದ್ರೋಹ. ಸಹೋದರನಿಗೆ ನ್ಯಾಯ ಸಿಗಬೇಕೆಂಬುದೇ ನಮ್ಮ ಆಗ್ರಹವಾಗಿದೆ. ಅಶ್ರಫ್‌ನನ್ನು ಕೊಂದ ಬಳಿಕವೂ ಕ್ರಿಕೆಟ್ ಆಡಿದ್ದ ಮನೋಭಾವದ ವಿರುದ್ಧವಾಗಿದೆ ನಮ್ಮ ಹೋರಾಟ. ಸಹೋದರನಿಗೆ ನ್ಯಾಯ ಸಿಗಲಿದೆ ಎಂಬುದು ನಮಗೆ ನಂಬಿಕೆ ಇದೆ” ಎಂದು ಗುಂಪು ಹತ್ಯೆಗೊಳಗಾದ ಅಶ್ರಫ್ ಅವರ ಸಹೋದರ ಅಬ್ದುಲ್ ಜಬ್ಬಾರ್ ತಿಳಿಸಿದರು.

WhatsApp Image 2025 06 28 at 5.57.51 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...