ಸಚಿವ ಸ್ಥಾನ ಸಿಗದವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತೆ: ಸತೀಶ ಜಾರಕಿಹೊಳಿ

Date:

Advertisements

ಸಚಿವ ಸ್ಥಾನ ಸಿಗದರು ಅಸಮಾಧಾನ ಹೊರಹಾಕುವುದು ಸ್ವಾಭಾವಿಕ. ಯಾರಿಗೆ ಬೇಸರ ಆಗಿದೆ ಅವರನ್ನು ವರಿಷ್ಠರು ಕರೆಯಿಸಿ ಮಾತನಾಡುತ್ತಾರೆ. ಅಂತವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತದೆ ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಂದಿಳಿದ ಅವರು, ಮಾಧ್ಯಮ ಪ್ರತಿನಿಧಿಗಳ ಜೊತೆ ಪ್ರತಿಕ್ರಿಯಿಸಿದರು.

“ಬೆಳಗಾವಿ ಜಿಲ್ಲೆಯ ಹಲವು ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ಬಾರಿ ಗೆದ್ದ ಶಾಸಕರಲ್ಲಿ ಕನಿಷ್ಠ ಎರಡು ಅಥವಾ ಮೂರು ಬಾರಿ ಗೆದ್ದವರು ಹೆಚ್ಚಿದ್ದಾರೆ. ಹೀಗಾಗಿ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಎಲ್ಲೆಡೆ ಕೇಳಿಬರುತ್ತಿದೆ” ಎಂದರು.

Advertisements

“ಸಚಿವರಿಗೆ ಖಾತೆ ಹಂಚಿಕೆ ಅಂತಿಮವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಪಟ್ಟಿಗೆ ರಾಜ್ಯಪಾಲರಿಂದ ಅಂಕಿತ ಬೀಳಬೇಕಿದೆ. ವಿರೋಧ ಪಕ್ಷದವರು ಸರ್ಕಾರ ಟೇಕಫ್ ಆಗಿಲ್ಲ ಎನ್ನುತ್ತಾರೆ. ಹಾಗಾಗಿ ಸಂಪುಟ ವಿಸ್ತರಣೆಯನ್ನು ಒಂದೇ ಬಾರಿ ಟೇಕಫ್ ಮಾಡಲಾಗಿದೆ” ಎಂದು ಹೇಳಿದರು.

ಬಿಜೆಪಿ ಸರ್ಕಾರದ ಯೋಜನೆಗಳನ್ನು ಮುಂದುವರಿಸುತ್ತೀರಾ ಎಂದು ಪ್ರಶ್ನಿಸಿದಾಗ, “ಜನಪರವಾಗಿದ್ದರೆ ಮುಂದುವರಿಸುತ್ತೇವೆ. ಅನವಶ್ಯಕವಾಗಿದ್ದರೆ ಸ್ಥಗಿತಗೊಳಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

Download Eedina App Android / iOS

X