ʼಯಾರು ಸಂವಿಧಾನವನ್ನು ಪ್ರೀತಿಸುತ್ತಾರೋ, ಅವರು ದೇಶವನ್ನೂ ಪ್ರೀತಿಸುತ್ತಾರೆʼ; ʼಪೋಸ್ಟರ್ʼನಲ್ಲೇ ಮಹಿಳಾ ಕಾಂಗ್ರೆಸ್ ತಿರುಗೇಟು

Date:

ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್‌ಎಸ್‌ಎಸ್ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದನ್ನು ಖಂಡಿಸಿ ಬಿಜೆಪಿ ನಾಯಕರು ನಡೆಸಿದ್ದ ʼಪೋಸ್ಟರ್ʼ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಪದಾಧಿಕಾರಿಗಳು ಬುಧವಾರ ʼಪೋಸ್ಟರ್‌ʼ ಅಭಿಯಾನದ ಮೂಲಕವೇ ತಿರುಗೇಟು ನೀಡಿದ್ದಾರೆ.

- Advertisement -

ಕಲಬುರಗಿಯ ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಂವಿಧಾನ ಪೀಠಿಕೆ ಹಾಗೂ ಪೋಸ್ಟರ್‌ಗಳೊಂದಿಗೆ ಜಮಾಯಿಸಿದ ಮಹಿಳಾ ಕಾಂಗ್ರೆಸ್‌ ಜಿಲ್ಲಾ ಮುಖಂಡರು, ಕಾರ್ಯಕರ್ತರು ಬಸ್‌, ಆಟೊ, ಗೋಡೆ, ಫಲಕಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸಿದರು. ಆರ್‌ಎಸ್‌ಎಸ್‌ಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
WhatsApp Image 2025 10 15 at 6.40.16 PM

ಎಲ್ಲೆಡೆ ಅಂಟಿಸಿ ಪೋಸ್ಟರ್‌ನಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವವರು ದೇಶಪ್ರೇಮಿಗಳುʼ, ʼಯಾರು ಸಂವಿಧಾನವನ್ನು ಪ್ರೀತಿಸುತ್ತಾರೋ, ಅವರು ದೇಶವನ್ನೂ ಪ್ರೀತಿಸುತ್ತಾರೆʼ, ʼಯಾರು ದೇಶವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್‌ ಅನ್ನು ಧಿಕ್ಕರಿಸುತ್ತಾರೆʼ ಎಂದು ಬರೆಯಲಾಗಿದ್ದು, ಸಂವಿಧಾನ ಪೀಠಿಕೆ, ಬುದ್ಧ, ಬಸವ, ಅಂಬೇಡ್ಕರ್‌ ಜೊತೆಗೆ ಪ್ರಿಯಾಂಕ್‌ ಖರ್ಗೆ ಚಿತ್ರವಿದೆ.

ಇದನ್ನೂ ಓದಿ : ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಆರ್‌ಎಸ್‌ಎಸ್ ಎರಡು ಬಾರಿ ಬ್ಯಾನ್‌ ಮಾಡಿದ್ರು : ಸಚಿವ ಸಂತೋಷ ಲಾಡ್

ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ರೇಣುಕಾ ಸಿಂಗೆ ಮಾತನಾಡಿ, ʼಸಚಿವ ಪ್ರಿಯಾಂಕ್‌ ಅವರು ಆರ್‌ಎಸ್‌ಎಸ್‌ ಕುರಿತು ರಾಜ್ಯದ ಜನರ ಕೊರಳ ಧ್ವನಿಯಾಗಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರೇನೂ ಆರ್‌ಎಸ್‌ಎಸ್ ನಿಷೇಧಿಸಿ ಎಂದಿಲ್ಲ. ಸಚಿವ ಪ್ರಿಯಾಂಕ್‌ ಅವರನ್ನು ಬೆಂಬಲಿಸಿ ನಾವೂ ಆರ್‌ಎಸ್‌ಎಸ್‌ ನಿಷೇಧಿಸುವಂತೆ ಆಗ್ರಹಿಸಿ ಪ್ರಧಾನಿ ಹಾಗೂ ಕೇಂದ್ರ ಗೃಹಸಚಿವರಿಗೆ ಪತ್ರ ಬರೆಯುತ್ತೇವೆʼ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...