ಉಡುಪಿ | ತೊಟ್ಟಂ ಚರ್ಚಿನಲ್ಲಿ ಮುದ ನೀಡಿದ ‘ಈಸ್ಟರ್ ಕಲಾ ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ

Date:

Advertisements

ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ತೊಟ್ಟಂ ಸಂತ ಅನ್ನಮ್ಮ ಚರ್ಚ್ ಘಟಕದ ವಿವಿಧ ಯೋಜನೆಗಳ ಸಹಾಯರ್ಥವಾಗಿ ಭಾನುವಾರ ಚರ್ಚಿನ ಬಯಲು ರಂಗ ವೇದಿಕೆಯಲ್ಲಿ ಆಯೋಜಿಸಿದ್ದ ಈಸ್ಟರ್ ಕಲಾ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನೆರೆದ ಪ್ರೇಕ್ಷಕರಿಗೆ ಮುದ ನೀಡಿತು.
ಕಾರ್ಯಕ್ರಮವನ್ನು ಹೆಸರಾಂತ ಕೊಂಕಣಿ ಗಾಯಕರಾದ ದಿ|ವಿಲ್ಫಿ ರೆಬಿಂಬಸ್ ಮತ್ತು ಕೊಂಕಣ್ ಮೈನಾ ಮೀನಾ ರೆಬಿಂಬಸ್ ಅವರ ಪುತ್ರ ಗಾಯಕ ವಿಶ್ವಾಸ್ ರೆಬಿಂಬಸ್ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ರೊನಾಲ್ಡ್ ಡಿ ಆಲ್ಮೇಡಾ ಮಾತನಾಡಿ ಸಮುದಾಯದಲ್ಲಿ ಸಂಘಟನಾತ್ಮಕವಾಗಿ ಒಗ್ಗಟ್ಟಿನಿಂದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಾಗ ಉತ್ತಮ ಫಲಿತಾಂಶ ಸಾಧ್ಯವಿದೆ. ನಾವು ನೀಡುವ ಸೇವೆ ಸಮುದಾಯದ ಒಳಿತಿಗೆ ಕಾರಣವಾಗುವಂತಿರಬೇಕು ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಬೇಕು ಎಂದರು.

1005211244

ಕಾರ್ಯಕ್ರಮದಲ್ಲಿ ಪ್ರತಿಭಾಂಗಣ್ ಸಾಂಸ್ಕೃತಿಕ ಸಂಘಟನೆಯ ಉದ್ಘಾಟನೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ನೆರವೇರಿಸಿ ನಾವು ಮನುಷ್ಯರಾಗಬೇಕೆ ಹೊರತು ಯಂತ್ರಗಳಾಗಬಾರದು. ಮನುಷ್ಯನ ಬದುಕಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅತೀ ಅಗತ್ಯವಾಗಿ ಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ ಸಾಧ್ಯವಿದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ಕಥೊಲಿಕ್ ಸಭಾ ಸಂಘಟನೆಯ ವತಿಯಿಂದ ಆಧ್ಯಾತ್ಮಿಕ ನಿರ್ದೇಶಕರಾಗಿರುವ ವಂ|ಡೆನಿಸ್ ಡೆಸಾ ಅವರನ್ನು ಸರ್ವ ಸದಸ್ಯರು ಸೇರಿಕೊಂಡು ಸನ್ಮಾನಿಸಿದರು.

Advertisements

ಕಲಾಸಂಜೆ ಕಾರ್ಯಕ್ರಮದಲ್ಲಿ ಹೆಸರಾಂತ ಸಂಗೀತ ತಂಡ ನೆಲ್ಸನ್ ಲೂವಿಸ್ ಸಂತೆಕಟ್ಟೆ ಇವರ ಕ್ಯಾರಲ್ಸ್ ಬೀಟ್ ಗ್ರೂಪ್ ತಂಡ ಹಾಗೂ ಸ್ಥಳೀಯ ಕಲಾವಿದರಿಂದ ಉತ್ತಮವಾದ ಕೊಂಕಣಿ, ಕನ್ನಡ, ಹಿಂದಿ, ಹಾಡುಗಳು ಪ್ರದರ್ಶನಗೊಂಡವು. ಮಂಗಳೂರಿನ ಹಾಸ್ಯ ತಂಡ ಮೆಮೊರಿ ಇವರಿಂದ ಹಾಸ್ಯ ಕಾರ್ಯಕ್ರಮಗಳು ನೆರೆದಿದ್ದವರನ್ನು ಹಾಸ್ಯ ಲೋಕದಲ್ಲಿ ಮುಳುಗಿಸಿತು. ಪ್ರತಿಭಾಂಗಣ್ ಸಂಘಟನೆಯ ಕಲಾವಿದರಿಂದ ವೆಚಿಕ್ ಪೂತ್ ಹಾಸ್ಯ ಪ್ರಹಸನ ಪ್ರದರ್ಶನಗೊಂಡಿತು
ವಂ|ಡೆನಿಸ್ ಡೆಸಾ ಅವರಿಂದ ತಾಯಿಯ ಪ್ರೀತಿ ಮತ್ತು ಮಮತೆಯನ್ನು ಸಾರುವ ಕೊಂಕಣಿ ಗೀತೆ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್, ಸ್ಥಳೀಯ ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ಸುಶ್ಮಾ, ಪ್ರತಿಭಾಂಗಣ್ ಸಂಘಟನೆಯ ಅಧ್ಯಕ್ಷರಾದ ಕ್ಲಾರೆನ್ಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಕಥೊಲಿಕ್ ಸಭಾ ತೊಟ್ಟಂ ಘಟಕದ ಅಧ್ಯಕ್ಷರಾದ ವೀನಾ ಫೆರ್ನಾಂಡಿಸ್ ಸ್ವಾಗತಿಸಿ ಕಾರ್ಯದರ್ಶಿ ಶಾಂತಿ ಪಿಕಾರ್ಡೊ ವಂದಿಸಿದರು. ಲವೀನಾ ಫೆರ್ನಾಂಡಿಸ್ ಸಭಾ ಕಾರ್ಯಕ್ರಮ ಹಾಗೂ ನಾನು ಮರೋಲ್ ತೊಟ್ಟಂ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X