ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

Date:

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ದೌರ್ಜನ್ಯವನ್ನು ತಡೆಯಲು ಬಿಜೆಪಿ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ.ಸಾಗರ ತಿಳಿಸಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿರುವ ಬಿಜೆಪಿ ಮತ್ತೆ ಬ್ರಾಹ್ಮಣಶಾಹಿ ಮತ್ತು ಮನುವಾದಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕೇಂದ್ರದಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗ ಸಮಸ್ಯೆ ಉಲ್ಭಣಗೊಂಡಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಹೇಳಿದ್ದರು. ಆದರೆ ಉದ್ಯೋಗಗಳನ್ನು ಕಸಿದಿದ್ದಾರೆ. ಸಂವಿಧಾನ ಮತ್ತು ಮೀಸಲಾತಿಗೆ ಸ್ಫೂರ್ತಿ ನೀಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಕ್ರಮೇಣವಾಗಿ ಮೊಟಕುಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಸಿಲಿಂಡರ್ ಬೆಲೆ ಸಾವಿರ ದಾಟಿದೆ. ರಾಜ್ಯದ ಪಾಲಿನ ತೆರಿಗೆ ನೀಡಲಿಲ್ಲ. ಶ್ರಮಿಕ ವರ್ಗದವರಿಗೆ ಬೆಲೆ ಇಲ್ಲ. ಒಟ್ಟಿನಲ್ಲಿ ಸಂವಿಧಾನ ವಿರೋಧಿ ನಡೆ ಬಿಜೆಪಿ ಅನುಸರಿಸುತ್ತಿದೆ. ದೇಶ ಪ್ರಭುದ್ಧವಾಗಬೇಕು. ಜನರ ಜೀವನ ಮಟ್ಟ ಸುಧಾರಣೆ ಆಗಬೇಕಾದರೆ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕು. ದಲಿತ ಸಂಘರ್ಷ ಸಮಿತಿ ಸಂಪೂರ್ಣವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದೆ. ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರನ್ನು ಗೆಲ್ಲಿಸಬೇಕು” ಎಂದು ಕೋರಿದರು.

ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ಮಾತನಾಡಿ, “ನಾನು ಜೆಡಿಎಸ್‌ನಲ್ಲಿ ಮಾಜಿ ಶಾಸಕ ಬಂಡೆಪ್ಪ ಖಾಶೆಂಪೂರ ಅವರೊಂದಿಗೆ ಉತ್ತಮ ಒಡನಾಟ ಹೋಂದಿದ್ದೇನೆ. ಆದರೆ ಜೆಡಿಎಸ್ ಸದಸ್ಯತ್ವ ಪಡೆದಿಲ್ಲ. ನನ್ನ ಧರ್ಮಪತ್ನಿ ಜೆಡಿಎಸ್‌ನಿಂದ ಜಿಪಂ ಸದಸ್ಯರಾಗಿ ಆಯ್ಕೆಯಾಗಿದ್ದರು.‌ ಆದರೆ ನನ್ನ ಸಂಪೂರ್ಣ ಬೆಂಬಲ ಕಾಂಗ್ರೆಸ್‌ ಪಕ್ಷಕ್ಕಿದೆ. ಸಂವಿಧಾನದ ಆಶಯಗಳು ಉಳಿಯಬೇಕಾದರೆ ಬಿಜೆಪಿ ಸೋಲಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಪ್ರತಿಪಾದಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ ಪಕ್ಷಗಳನ್ನು ಧಿಕ್ಕರಿಸಿ ಜನಪರ ಚಿಂತನೆಯ ಪಕ್ಷವನ್ನು ಬೆಂಬಲಿಸಿ ಎಂಬ ಮತದಾರರ ಜಾಗೃತಿ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಈಜಲು ಹೋಗಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವು

ಸುದ್ದಿಗೋಷ್ಠಿಯಯಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ಅರುಣ ಪಟೇಲ್, ಜಿಲ್ಲಾ ಸಂಘಟನಾ ಸಂಚಾಲಕ ಅಶೋಕ ಗಾಯಕವಾಡ, ರಾಜು ವಾಘಮಾರೆ, ತಾಲೂಕಾ ಸಂಚಾಲಕ ರಮೇಶ ಬೆಲ್ದಾರ್, ಝರೆಪ್ಪ ವರ್ಮಾ, ರಾಹುಲ್ ಹಾಲಹಿಪ್ಪರ್ಗಾ, ಶಿವರಾಜ ತಡಪಳ್ಳಿ, ವಾಮನ್ ಮೊಸಲಗಿ, ಸತೀಶ ರತ್ನಾಕರ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...