‘ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ’ ಎಂದು ವ್ಯಕ್ತಿಗೆ ಬೆದರಿಕೆ: ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್

Date:

  • ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್
  • ಸುರೇಶ್ ಬಾಬು ಎಂಬುವವರಿಗೆ ಕರೆ ಮಾಡಿ ಬೆದರಿಸಿದ್ದ ‘ಪೋಸ್ಟ್‌ ಕಾರ್ಡ್‌’ ಸಂಚಾಲಕ

ಸಂಘಪರಿವಾರದಲ್ಲಿ ಗುರುತಿಸಿಕೊಂಡು, ಪೋಸ್ಟ್‌ ಕಾರ್ಡ್‌ ಎಂಬ ಫೇಸ್‌ಬುಕ್ ಪೇಜ್ ನಡೆಸುತ್ತಿರುವ ಹಿಂದುತ್ವ ಮುಖಂಡ ಮಹೇಶ್ ವಿಕ್ರಮ್ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಹಾಕಿದ್ದಲ್ಲದೇ, ಮಾನಹಾನಿಕಾರ ಕಾಮೆಂಟ್ ಹಾಕಿದ್ದಾರೆ ಎಂದು ಅವರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ವಿಕ್ರಮ್ ಹೆಗಡೆ ಟಿವಿ ವಿಕ್ರಮ್ ಅಧಿಕೃತ ಪೇಜ್‌ನಲ್ಲಿ ದೂರುದಾರ ಸುರೇಶ್ ಬಾಬು ಮತ್ತು ಅವರ ಮಗಳ ಬಗ್ಗೆ ಮಾನಹಾನಿಯಾಗುವ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರುದಾರ ಸುರೇಶ್ ಬಾಬು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಮಹೇಶ್ ವಿಕ್ರಮ್ ಹೆಗಡೆ ಸೆ.4ರಂದು ತನಗೆ ಕರೆ ಮಾಡಿ, “ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ತುಕೊಳ್ತೀಯಾ?” ಎಂದು ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಎಫ್‌ಐಆರ್‌ ಪ್ರತಿ

ಅಷ್ಟಲ್ಲದೇ, ‘ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ. ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ. ನಿನಗೆ ಇನ್ನೊಂದು ವಾರದಲ್ಲಿ ಗತಿ ಕಾಣಿಸುತ್ತೇವೆ’ ಎಂಬ ರೀತಿ ದೂರುದಾರರಿಗೆ ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ಸುರೇಶ್ ಬಾಬು ಉಲ್ಲೇಖಿಸಿದ್ದು, ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ತಮ್ಮ ಹಕ್ಕುಗಳಿಗಾಗಿ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ...

ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ...

ಯಾದಗಿರಿ | ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ....