ಬೆಳಗಾವಿ | ಫೇಸ್‌ಬುಕ್ ಸ್ನೇಹಿತನ ಜೊತೆ ಸೇರಿ ಪತಿಯ ಕೊಲೆ: ಪತ್ನಿ ಸೇರಿ ಮೂವರ ಬಂಧನ

Date:

Advertisements

ಬೆಳಗಾವಿ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪತ್ನಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂವರನ್ನು ಹಿಂಡಲಗಾದಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

ಉದ್ಯಮಿ ಪತ್ನಿ ಉಮಾ ಪದ್ಮಣ್ಣವರ (41), ಅವರ ಫೇಸ್‌ಬುಕ್‌ ಸ್ನೇಹಿತ, ಕೊಡಗು ಜಿಲ್ಲೆಯ ಶನಿವಾರಸಂತೆ ಗ್ರಾಮದ ಶೋಭಿತ್‌ ಗೌಡ (30) ಮತ್ತು ಪವನ್‌ (27) ಬಂಧಿತ ಆರೋಪಿಗಳು.

ಸಂತೋಷ್​ ಅವರ ಪತ್ನಿ ಉಮಾ ಪದ್ಮಣ್ಣವರ, ಬೆಳಗಾವಿ ನಗರದ ಶೋಭಿತಗೌಡ ಹಾಗೂ ಪದ್ಮಣ್ಣವರ ಮನೆ ಕೆಲಸ ಮಾಡುತ್ತಿದ್ದ ನಂದಾ ಕುರಿಯಾ, ಪ್ರಕಾಶ ಕುರಿಯಾ ಮತ್ತು ಇನ್ನೋರ್ವ ಅಪರಿಚಿತ ಸೇರಿ ಒಟ್ಟು ಐವರು ಆರೋಪಿಗಳ ವಿರುದ್ಧ ಕೇಸು ದಾಖಲಾಗಿದ್ದವು.

Advertisements

ಕೊಲೆ ಪ್ರಕರಣದಲ್ಲಿ ಮನೆಗೆಲಸದವರಾದ ನಂದಾ ಕುರಿಯಾ, ಪ್ರಕಾಶ ಕುರಿಯಾ ಅವರ ಪಾತ್ರದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿಲ್ಲ. ಹಾಗಾಗಿ, ಅವರನ್ನು ಬಂಧಿಸಿಲ್ಲ ಎಂದು ಬೆಳಗಾವಿ ಪೊಲೀಸರು ತಿಳಿಸಿದ್ದಾರೆ.

ತಂದೆಯ ಕೊಲೆ ಬಗ್ಗೆ ಮಗಳಿಂದಲೇ ದೂರು

ಅ‌ಕ್ಟೋಬರ್​​ 9ರಂದು ಬೆಳಗಾವಿ ಆಂಜನೇಯ ನಗರದ ನಿವಾಸಿ ಸಂತೋಷ ಪದ್ಮಣ್ಣವರ ಸಾವನ್ನಪ್ಪಿದ್ದರು. ಬಳಿಕ ಅ‌.10ರಂದು ಸದಾಶಿವನಗರದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಆದರೆ, ಬಳಿಕ ತಂದೆಯ ಸಾವಿನ ಬಗ್ಗೆ ಅನುಮಾನದ ಮೇಲೆ ಮಗಳು ಸಂಜನಾ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು.

WhatsApp Image 2024 10 18 at 2.58.50 PM

ತಂದೆಯ ಮನೆಗೆ ಯಾರೆಲ್ಲಾ ಬಂದಿದ್ದರು ಎಂದು ಸಂಜನಾ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದ್ದಾರೆ. ಆದರೆ ಈ ವೇಳೆ, ತಾಯಿ ಉಮಾ, ಮಗಳನ್ನು ಗದರಿಸಿದ್ದರಂತೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಸಂಜನಾ, ಅಕ್ಟೋಬರ್ 15ರಂದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತಂದೆಯ ಸಾವಿನ ಬಗ್ಗೆ ಅನುಮಾನವಿದ್ದು, ತನಿಖೆ ನಡೆಸಬೇಕು ಎಂದು ದೂರು ನೀಡಿದ್ದರು.

ಪುತ್ರಿ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಮಾಳಮಾರುತಿ ಪೊಲೀಸರು, ಸಂತೋಷ ಪದ್ಮಣ್ಣವರ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದರು. ಮೃತ ಸಂತೋಷ್ ಮಗಳು ಸಂಜನಾ, ಬೆಳಗಾವಿ ಎಸಿ ಶ್ರವಣ ನಾಯಕ ಹಾಗೂ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿತ್ತು.

ಬೆಳಗಾವಿ 31

ಇದೀಗ, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಂತೋಷ್ ಅವರ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಆ ವರದಿ ಬಂದ ಬಳಿಕ ಪ್ರಕರಣದ ಸ್ಪಷ್ಟತೆ ಇನ್ನಷ್ಟು ಗೊತ್ತಾಗಲಿದೆ ಎಂದು ತನಿಖೆ ನಡೆಸುತ್ತಿರುವ ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2024 10 18 at 2.58.49 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X