ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದವರಾದ ಪೃಥ್ವಿರಾಜ್ (21) ಮತ್ತು ಚಿಂತನ್(19) ಎಂದು ಗುರುತಿಸಲಾಗಿದೆ.
ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ.
