ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನಡೆದಿದೆ.
ಮೃತ ಯುವಕರನ್ನು ಸೂರಜ್ (19), ಜೈಸನ್ (19) ಮತ್ತು ಲಾರೆನ್ಸ್ (21) ಎಂದು ಗುರುತಿಸಲಾಗಿದೆ.
ವೇಣೂರು ಚರ್ಚ್‌ನಲ್ಲಿ ಕಾರ್ಯಕ್ರಮಕ್ಕೆಂದು ಈ ಮೂವರು ಯುವಕರು ತಮ್ಮ ಗೆಳೆಯನ ಮನೆಗೆ ಬಂದಿದ್ದರು ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ಸಾವು
ಯುವಕರು ಕಿಂಡಿ ಅಣೆಕಟ್ಟಿನ ಸಮೀಪವಿರುವ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದು ನದಿ ನೀರಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕದಳದವರು ಧಾವಿಸಿದ್ದು ಸ್ಥಳೀಯರ ಸಹಾಯದೊಂದಿಗೆ ಮೃತದೇಹವನ್ನು ಮೇಲೆತ್ತಿದ್ದಾರೆ.
