ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

Date:

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು ಪುಸ್ತಕಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಬಿಡುಗಡೆ ಮಾಡಿದರು.

- Advertisement -

ಇಂಗ್ಲಿಷ್ ಭಾಷಿಗರಿಗಾಗಿ ಕೆ.ಟಿ. ಗಟ್ಟಿ ಅವರ ‘ಲರ್ನ್ ತುಳು ನ್ಯಾಚುರಲಿ’ ಹಾಗೂ ಕನ್ನಡ ಭಾಷಿಗರಿಗಾಗಿ ಡಾ. ಯು.ಪಿ. ಉಪಾಧ್ಯಾಯ ಅವರ ‘ತುಳು ಕೈಪಿಡಿ’ ಕೃತಿಗಳ ಪರಿಷ್ಕೃತ ಮುದ್ರಣವನ್ನು ಅಕಾಡೆಮಿ ಹೊರತಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ತುಳು ಕಲಿಕೆಯ ಪುಸ್ತಕಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಎರಡು ಕೃತಿಗಳ ಪರಿಷ್ಕೃತ ಮುದ್ರಣವನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಸಚಿವರಿಗೆ ಮಾಹಿತಿ ನೀಡಿದರು.

ಬೆಂಗಳೂರಿನ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ನಡೆದ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾಜಿ ಸಚಿವೆ ಡಾ. ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುಶ್ರೀ ಎನ್., ಇಲಾಖೆಯ ನಿರ್ದೇಶಕಿ ಡಾ. ಕೆ.ಎಂ. ವಸುಂಧರ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಹಾಗೂ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಮಾನವ ಹಕ್ಕುಗಳ ಮಂಡಳಿಯ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ನೇಮಕ

ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್...

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ...

ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್ ಕಿರಿಕಿರಿಗೆ ಪ್ರಯಾಣಿಕರು ಹೈರಾಣ

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು,...