ಮಂಗಳೂರು | ತುಳುನಾಡಿನ ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಶ್ರೇಷ್ಠ ನಿರ್ಧಾರ : ಡಾ.ಗಣನಾಥ ಎಕ್ಕಾರ್

Date:

ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ ಸರಕಾರದ ನಡೆ ಶ್ಲಾಘನೀಯವಾದದ್ದು ಎಂದು ಜಾನಪದ ವಿದ್ವಾಂಸ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಹೇಳಿದರು.

- Advertisement -

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಸಹಭಾಗಿತ್ವದಲ್ಲಿ ತುಳು ಭವನದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತದೊಂದಿಗೆ ಮಾತುಕತೆ ಕಾರ್ಯಕ್ರಮದಲ್ಲಿ ಅವರು ಅಭಿನಂದನೆ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತುಳುವಿನ ಪಾಡ್ದನವು ಜಾನಪದ ಮಹಾಕಾವ್ಯವಾಗಿದ್ದು, ಪಾಡ್ದನ ಹೇಳುವುದಲ್ಲ ಅದು ಕಟ್ಟುವುದು ,ಪಾಡ್ದನ ಕಟ್ಟುವ ಕಲೆಗೆ ಅದರದ್ದೇ ಆದ ವಿಶಿಷ್ಟ ಚೌಕಟ್ಟು ಹಾಗೂ ಸ್ವರೂಪವಿದೆ, ಆ ಕಾರಣಕ್ಕಾಗಿ ಪಾಡ್ದನ ಕಲಾವಿದರು ಸ್ವತಂತ್ರ ಕವಿಗಳೇ ಆಗಿರುತ್ತಾರೆ. ಪಾಡ್ದನ ಕವಿಗಳ ದಾಖಲೀಕರಣ ನಡೆಯಬೇಕಾಗಿದೆ ಎಂದು ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರು ಹೇಳಿದರು.

ದೈವಾರಧನೆಯೂ ತುಳು ನಾಡಿನ ಆರಾಧನಾ ಶಕ್ತಿಯ ಮೂಲಸೆಲೆಯಾಗಿದ್ದು, ಉಮೇಶ್ ಪಂಬದ ಅವರಂತ ನೂರಾರು ದೈವಾರಾಧಕರು ಶತಮಾನಗಳಿಂದ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಇವತ್ತು ತುಳುನಾಡಿನ ಭೂತಾರಾಧನೆ ಪಡೆದಿರುವ ಜನಪ್ರಿಯತೆಯ ಹಿಂದೆ ಶತಮಾನಗಳ ಶ್ರದ್ಧೆಯ ಹಾಗೂ ಬದ್ಧತೆಯ ಫಲ ಇದೆ ಎಂದು ಗಣನಾಥ ಶೆಟ್ಟಿ ಅವರು ಉಲ್ಲೇಖಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಅವರ ಜೊತೆಗೆ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ ಅವರು ಸಂವಾದ ನಡೆಸಿಕೊಟ್ಟರು. ಉಮೇಶ್ ಕೊಂಬದ ಅವರು ಮಾತನಾಡಿ, ನಿಷ್ಠೆ ಹಾಗೂ ಶ್ರದ್ಧೆಯಿಂದ ಸೇವೆ ಸಲ್ಲಿಸುತ್ತಿರುವ ತಮ್ಮನ್ನು ಸರಕಾರ ಗುರುತಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಸಿಂಧೂ ಗುಜರನ್ ಅವರು ತೆಂಬರೆ ನುಡಿಸಿ ಪಾಡ್ದನ ಪ್ರಸ್ತುತಪಡಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ ಅವರು ಶುಭಕೋರಿ ಮಾತನಾಡಿದರು. ಅಕಾಡೆಮಿ ಸದಸ್ಯೆ ಅಕ್ಷಯ ಆರ್. ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...