ತುಮಕೂರು | 15 ಹೊಸ ಬಸ್‌ಗಳಿಗೆ ಚಾಲನೆ; ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಅಧ್ಯಕ್ಷ

Date:

ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ಅವರು 15 ನೂತನ ಅಶ್ವಮೇಧ ಬಸ್‌ಗಳಿಗೆ ಚಾಲನೆ ನೀಡಿದರು. ಬಳಿಕ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್  ಶ್ರೀನಿವಾಸ್ ನಿಲ್ದಾಣದಲ್ಲಿ ಒಂದು ಸುತ್ತು ಬಸ್ ಓಡಿಸುವ ಮೂಲಕ ಎಲ್ಲರ ಗಮನ ಸೆಳೆದರು.

- Advertisement -

“ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿದೆ. ಅದೇ ರೀತಿ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹೊಸ ಬಸ್‌ಗಳನ್ನು ಸಂಚಾರಕ್ಕೆ ನಿಯೋಜಿಸಲಾಗುತ್ತಿದೆ” ಎಂದು ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನೂತನವಾಗಿ ಚಾಲನೆ ದೊರೆತ 15 ಅಶ್ವಮೇಧ ಬಸ್‌ಗಳ ಪೈಕಿ 8 ಬಸ್‌ಗಳನ್ನು ಬೆಂಗಳೂರು-ತುಮಕೂರು ಮಾರ್ಗಕ್ಕೆ ಹಾಗೂ 7 ಬಸ್‌ಗಳನ್ನು ವೇಗದೂತ ಮಾರ್ಗದಲ್ಲಿ ಓಡಿಸಲಾಗುತ್ತದೆ” ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು-ಮನಮದುರೈ ನಡುವೆ ವಿಶೇಷ ರೈಲು ಸಂಚಾರ

ಸಹಕಾರ ಕೆ ಎನ್  ರಾಜಣ್ಣ, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್, ಶಾಸಕ ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ, ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಅಡಿಷನಲ್ ಎಸ್‌ಪಿ ಮರಿಯಪ್ಪ, ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರ ಕಚೇರಿಯ ವೀಣಾ ದೇಸಾಯಿ, ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಸಿದ್ದೇಶ್, ಡಿವೈಎಸ್‌ಪಿ ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...