ತುಮಕೂರು | ರಾತ್ರಿ ಊಟಕ್ಕೆ ಬಡಿಸಲು ಪತ್ನಿ ನಿರಾಕರಣೆ; ಆಕೆಯ ಶಿರಚ್ಛೇದ ಮಾಡಿ, ಚರ್ಮ ಸುಲಿದು, ದೇಹ ಕತ್ತರಿಸಿದ ಪತಿ

Date:

ರಾತ್ರಿ ಊಟ ನೀಡಲು ನಿರಾಕರಿಸಿದ್ದಕ್ಕೆ ಪತ್ನಿಯ ಶಿರಚ್ಛೇದ ಮಾಡಿದ್ದು, ಆಕೆಯ ದೇಹದ ಚರ್ಮ ಸುಲಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ಹುಲಿಯೂರುದುರ್ಗ ಗ್ರಾಮದ ಪುಷ್ಪಾ(35) ಅವರ ಮೃತದೇಹ ಅವರು  ವಾಸಿಸುತ್ತಿದ್ದ ಮನೆಯ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಪುಷ್ಪಾ ಮತ್ತು ಶಿವರಾಮ್ ದಂಪತಿಗೆ ಮದುವೆಯಾಗಿ 10 ವರ್ಷಗಳಾಗಿದ್ದು, ಎಂಟು ವರ್ಷದ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮರಗೆಲಸದಲ್ಲಿ ಕೆಲಸ ಮಾಡುತ್ತಿದ್ದ ಶಿವರಾಮ್ ಸೋಮವಾರ ರಾತ್ರಿ ಕೆಲಸದಿಂದ ಮನೆಗೆ ಹಿಂದಿರುಗಿದಾಗ ಅವರಿಬ್ಬರ ನಡುವೆ ಜಗಳವಾಗಿದೆ. ಶಿವರಾಂ ಕೆಲಸದ ವಿಚಾರವಾಗಿ ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರೆಂದು ತಿಳಿದುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಜಗಳ ಹೆಚ್ಚಾಗುತ್ತಿದ್ದಂತೆ, ಪುಷ್ಪಾ ಅವನಿಗೆ ಊಟ ಬಡಿಸಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಶಿವರಾಮ್ ಆಕೆಯನ್ನು ಮಾರಕಾಸ್ತ್ರದಿಂದ ಇರಿದು ಶಿರಚ್ಛೇದ ಮಾಡಿದ್ದಾನೆ. ಬಳಿಕ ಆಕೆಯ ದೇಹದ ಚರ್ಮವನ್ನು ಸುಲಿದು ತುಂಡುತುಂಡಾಗಿ ಕತ್ತರಿಸುತ್ತಾ ರಾತ್ರಿ ಕಳೆದಿದ್ದಾನೆ. ಕೊಲೆಯ ಸಮಯದಲ್ಲಿ ಮನೆಯಲ್ಲಿದ್ದ ಮಗ ನಿದ್ರೆಯಲ್ಲಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಾಟ್ಸಾಪ್‌ ಗ್ರೂಪ್‌ನಲ್ಲಿ ಸಿಎಂ ನಿಂದನೆ; ಬುದ್ದಿ ಹೇಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

“ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅವರು ಸಣ್ಣ ಪುಟ್ಟ ಜಗಳಗಳನ್ನು ಮಾಡಿಕೊಳ್ಳುತ್ತಿದ್ದರು. ಮಂಗಳವಾರ, ಅವರು ಅವನ ಕೆಲಸದ ಸಲುವಾಗಿ ಜಗಳವಾಡಿದರು. ಅವನು ತನ್ನ ಹೆಂಡತಿಯನ್ನು ಕೊಂದು ತನ್ನ ಸಹೋಯೋಗಿಗಳಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಅವರು ನಮಗೆ ಮಾಹಿತಿ ತಿಳಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...