ಗುಡುಗು-ಸಿಡಿಲು ಸಹಿತ ಮಳೆ : ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ : ಜಿಲ್ಲಾಧಿಕಾರಿ

Date:

ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

- Advertisement -

ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಭಾರಿ ಮಳೆ, ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ.

ಹವಾಮಾನ ಇಲಾಖೆ

ರಾಜ್ಯ, ಜಿಲ್ಲಾಡಳಿತ, ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ಸಾರ್ವಜನಿಕರಲ್ಲಿ ಮನವಿ :ನದಿ, ಹಳ್ಳದ, ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು, ಮತ್ತಿತರೆ ಚಟುವಟಿಕೆಗಳನ್ನು ನಡೆಸಬಾರದು. ನದಿ, ಹಳ್ಳ, ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ, ಸೆಲ್ಫಿಗಳನ್ನು ತೆಗೆಯಬಾರದು. ಮಕ್ಕಳು ಮತ್ತು ವಯೋವೃದ್ಧರನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ತೆರಳದಂತೆ ಎಚ್ಚರಿಕೆ ವಹಿಸಬೇಕು.

ಗುಡುಗು-ಮಿಂಚು, ಸಿಡಿಲು ಬಡಿಯುವ ಸಂದರ್ಭದಲ್ಲಿ ಮನೆಯ ಹೊರಗಡೆ ಇರುವವರು ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಿ ರಕ್ಷಣೆ ಪಡೆದುಕೊಳ್ಳಬೇಕು. ಮರ, ವಿದ್ಯುತ್ ಕಂಬ, ಜಲಾಶಯ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕೆರೆ-ಕಟ್ಟೆಗಳ ಏರಿ, ಬಂಡ್, ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ, ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್, ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ, ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ, ಇತರೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಾದ 7304975519, 0816-2213400, 155304ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...